ಕಾರವಾರ:ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಕೋವಿಡ್-19 ಸೋಂಕಿತರಿಗೆ ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಚಿಕಿತ್ಸೆ ನೀಡಲು ಕರೆತರಲಾಗುತ್ತಿದೆ. ಇದರಿಂದಾಗಿ ಕಾರವಾರದ ಜನತೆ ಗಾಬರಿಗೊಳಗಾಗುತ್ತಿದ್ದಾರೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಸಭೆಗೆ ಆಗಮಿಸಿದ್ದ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ ಈ ಬಗ್ಗೆ ಮನವಿ ಸಲ್ಲಿಸಿದರು.
ಭಟ್ಕಳದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸೋಂಕಿತರನ್ನು 130 ಕಿ.ಮೀ. ದೂರದ ಭಟ್ಕಳದಿಂದ ಕಾರವಾರದ ಆಸ್ಪತ್ರೆಗೆ ಕರೆತಂದರೆ ಸ್ಥಳೀಯ ಜನತೆಯ ಮನದಲ್ಲಿ ಭಯದ ವಾತಾವರಣ ಮೂಡುವುದು ಸಹಜವಾಗಿದೆ.
ಈ ಹಿಂದೆ ಇದ್ದ ಸೋಂಕಿತರನ್ನು ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದಂತೆ ಈಗಿನ ಸೋಂಕಿತರನ್ನೂ ಸಹ ಅಲ್ಲಿಗೆ ಸ್ಥಳಾಂತರಿಸಬೇಕು.
ಕಾರವಾರ ನಗರದ ಹೃದಯ ಭಾಗದಲ್ಲಿ ಇರುವ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವುದು ನಗರ ಭಾಗದ ಜನತೆಯಲ್ಲಿ ಆತಂಕ ಉಂಟುಮಾಡುತ್ತಿದೆ.
ಸೋಂಕಿತರಿಗೆ ಪತಂಜಲಿ ಆಸ್ಪತ್ರೆಯಲ್ಲಿ ಅಥವಾ ಅಲ್ಲಿಯ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಮನವಿ ಸಚಿವರಿಗೆ ಮನವಿ ಸಲ್ಲಿಸಿದರು.