ಕಾರವಾರ: ನಗರದ ವೈದ್ಯಕೀಯ ವಿಜ್ಞಾನಗಳ ಕಾಲೇಜಿನಲ್ಲಿ ನೂತನವಾಗಿ ಪ್ರಾರಂಭವಾಗಿರುವ ಕೋವಿಡ್ 19 ಸಾಂಕ್ರಾಮಿಕ ರೋಗದ ಪರೀಕ್ಷೆಗೆ ವೈರಾಲಜಿ ಪ್ರಯೋಗಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿರಾದ ಶಿವರಾಂ ಹೆಬ್ಬಾರ ಉದ್ಘಾಟಿಸಿದರು.
ಈ ಹಿಂದೆ ಕೋವಿಡ್ 19 ಲಕ್ಷಣ ಹೊಂದಿರುವ ವ್ಯಕ್ತಿಗಳ ಗಂಟಲು ದ್ರವವನ್ನು ಸಂಗ್ರಹಿಸಿ ಶಿವಮೊಗ್ಗ ಅಥವಾ ಬೆಂಗಳೂರಿಗೆ ಕಳುಹಿಸಬೇಕಾಗಿತ್ತು ಆದ್ದರಿಂದ ಫಲಿತಾಂಶ ವರದಿ ಶೀಘ್ರವಾಗಿ ಲಭಿಸುತ್ತಿರಲಿಲ್ಲ. ಈಗ ಕೆಲವು ಗಂಟೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಶಾಸಕಿ ಶ್ರೀಮತಿ ರೂಪಾಲಿ ನಾಯ್ಕ , ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ್ ಕೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಜಿಲ್ಲಾಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಂ.ರೋಷನ್, ಮೆಡಿಕಲ್ ಕಾಲೇಜ ನಿರ್ದೇಶಕ ಡಾ.ಗಜಾನನ ನಾಯಕ ಮುಂತಾದವರು ಉಪಸ್ಥಿತರಿದ್ದರು.