Header Ads Widget

Koojalli times ನಲ್ಲಿ ಪ್ರಸಾರವಾಗುವ ವಿವಿಧ ಬಗೆಯ ಕಾರ್ಯಕ್ರಮಗಳನ್ನು ವಿಕ್ಷೀಸಲು ನಮ್ಮ (facebook page), (youtube channel), (instagram), (twitter page) ಗಳನ್ನು follow ಮಾಡಿ

ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ಕಾಲು ಜಾರಿ ನದಿಗೆ ಬಿದ್ದು ಸಾವು : ಕುಮಟಾ ನುಶಿಕೋಟೆಯಲ್ಲಿ ಘಟನೆ


ಕುಮಟಾ: ತಾಲೂಕಿನ ನುಶಿಕೋಟೆಯ ಅಘನಾಶಿನಿ ನದಿಯ ಹಿನ್ನೀರು ಪ್ರದೇಶದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ಕಾಲು ಜಾರಿ ನದಿಗೆ ಬಿದ್ದು, ಮೃತಪಟ್ಟ ಘಟನೆ ನಡೆದಿದೆ.

Advertisement 
ತಾಲೂಕಿನ ನುಶಿಕೋಟೆಯ ನಿವಾಸಿ ಪಾಂಡುರಂಗ ತಿಮ್ಮ ಹರಿಕಂತ್ರ (40) ಮೃತಪಟ್ಟ ಮೀನುಗಾರ ಎನ್ನಲಾಗಿದೆ. ಈತನು ಎಂದಿನಂತೆ ಮಂಗಳವಾರ ರಾತ್ರಿ ನುಶಿಕೋಟೆ ಭಾಗಕ್ಕೆ ಹೊಂದಿಕೊಂಡಿರುವ ಅಘನಾಶಿನಿ ನದಿಯ ಹಿನ್ನೀರು ಪ್ರದೇಶದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದನು. 

Advertisement 
ಮೀನುಗಾರಿಕೆಯಲ್ಲಿ   ತೊಡಗಿದಾಗ ಜಾರಿ ನದಿಗೆ ಬಿದ್ದಿದ್ದಾನೆ. ಬುಧವಾರ ಬೆಳಗ್ಗೆ ಶವ ಪತ್ತೆಯಾಗಿದೆ. 
 ಸ್ಥಳೀಯರು  ಶವವನ್ನು ಗಮನಿಸಿದ್ದು ಗೋಕರ್ಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗೋಕರ್ಣ ಪೊಲೀಸರು ಸ್ಥಳಕ್ಕೆ ಆಗಮಿಸಿ, ಶವವನ್ನು ನದಿ ದಡದಿಂದ ಎತ್ತಿ ಕುಮಟಾ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಶವ ಎತ್ತಲು ಅಗತ್ಯ ವ್ಯವಸ್ಥೆ ಕಲ್ಪಿಸಿ ಸಹಕಾರ ನೀಡಿದ ಜಿ.ಪಂ ಸದಸ್ಯ ಪ್ರದೀಪ ನಾಯಕ

ಅಲ್ಲದೇ ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಪಂಚಾಯತ್ ಸದಸ್ಯ ಪ್ರದೀಪ ನಾಯಕ ಅವರು ಸ್ಥಳಕ್ಕೆ ತೆರಳಿ ಮೀನುಗಾರನ ಶವ ಎತ್ತಲು ಅಗತ್ಯ ವ್ಯವಸ್ಥೆ ಮಾಡಿಕೊಟ್ಟಿದ್ದು ಅಲ್ಲದೇ ಕುಮಟಾ ತಹಸೀಲ್ದಾರ್ ಮೇಘರಾಜ ನಾಯ್ಕ ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದ ಜಿ.ಪಂ ಸದಸ್ಯ ಪ್ರದೀಪ ನಾಯಕ ಅವರು, 
ಮೃತ ಮೀನುಗಾರನ ಕುಟುಂಬಕ್ಕೆ ಯೋಗ್ಯ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಮೀನುಗಾರಿಕೆ ಇಲಾಖೆಯ ಸಂಕಷ್ಟ ಪರಿಹಾದ ನಿಧಿಯಲ್ಲಿ ೫+೧ ಒಟ್ಟು 6 ಲಕ್ಷ ರೂ. ಪರಿಹಾರ ನೀಡಲು ಅವಕಾಶವಿದ್ದು, ಆ ಪರಿಹಾರವನ್ನು ಬಡ ಮೀನುಗಾರನ ಕುಟುಂಬಕ್ಕೆ ಒದಗಿಸಿಕೊಡಲು ಅಗತ್ಯ ಕ್ರಮ ವಹಿಸುವಂತೆ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದರು ಎನ್ನಲಾಗಿದೆ.