ಕಾರವಾರ: ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆಯು ಮಿನುಗಾರಿಕೆ, ಮುಜರಾಯಿ ಹಾಗೂ ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ವೇಳೆ ಸಮುದ್ರ ತೀರ ಹಾಗೂ ನದಿ ತೀರದಲ್ಲಿ ಕಡಲ ಕೊರೆತ ಹೆಚ್ಚಾಗುತ್ತಿದ್ದು, ತಡೆಗೊಡೆ ನಿರ್ಮಾಣ ಅಥವಾ ಪರ್ಯಾಯ ವ್ಯವಸ್ಥೆ ಮಾಡಬೇಕು. ಅಲ್ಲದೇ, ಹಿಂದಿನ ವಾರ ಅಂಕೋಲಾ ಹಾಗೂ ಕಾರವಾರ ತಾಲೂಕಿನಲ್ಲಿ
ಕಡಲ ಕೊರೆತ ಉಂಟಾದ ಪ್ರದೇಶಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಾಯಿ ನಾಯ್ಕ ಗಮನಕ್ಕೆ ತಂದರು .
ಅಂಕೋಲಾ ತಾಲೂಕಿನ ಬೊಬ್ರುವಾಡ ಪಂಚಾಯತಿ ನದಿಬಾಗ ಪ್ರದೇಶ ಕಡಲ ಕೊರೆತ ಪ್ರತಿಬಂಧಕ ಕಾಮಗಾರಿಗೆ ಈಗಾಗಲೇ ₹ 2 ಕೋಟಿ ಮಂಜೂರಾಗಿದ್ದು, ತ್ವರಿತವಾಗಿ ಕಾಮಗಾರಿ ಆರಂಭಿಸಬೇಕು. ಗಾಬಿತ ಕೇಣಿಯಲ್ಲಿ ಕಡಲ ಕೊರೆತ
ಪ್ರದೇಶಕ್ಕೆ ತುರ್ತಾಗಿ ಕಲ್ಲುಗಳನ್ನು ಹಾಕುವ ಮೂಲಕ ಕಡಲ ಕೊರೆತವನ್ನು ತಡೆಯಬೇಕು. ಅಂಕೋಲಾ ತಾಲೂಕಿನ ನದಿಬಾಗ ಗ್ರಾಮದ ಮನೆಗಳಿಗೆ ನೀರು ನುಗಿದ್ದು, ತೀರ ಪ್ರದೇಶದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅನುಸರಿಸಬೇಕಾದ ಕ್ರಮವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.
ನದಿ ಹಾಗೂ ಕಡಲ ತೀರದಲ್ಲಿ ಯಾವುದೇ ಸಮಸ್ಯೆಗಳಿದ್ದರೂ ತ್ವರಿತವಾಗಿ ಪರಿಹರಿಸಿಕೊಳ್ಳಬೇಕು.
ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.