Header Ads Widget

Koojalli times ನಲ್ಲಿ ಪ್ರಸಾರವಾಗುವ ವಿವಿಧ ಬಗೆಯ ಕಾರ್ಯಕ್ರಮಗಳನ್ನು ವಿಕ್ಷೀಸಲು ನಮ್ಮ (facebook page), (youtube channel), (instagram), (twitter page) ಗಳನ್ನು follow ಮಾಡಿ

SSLC ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಒಂದು ಗಂಟೆ ಮುಂಚಿತವಾಗಿ ಹಾಜರಾಗಿರಬೇಕು: ಉತ್ತರ ಕನ್ನಡ ಜಿಲ್ಲಾಧಿಕಾರಿ

ಕಾರವಾರ :- ಕೊರೊನಾ ಭೀತಿ ಹಿನ್ನಲೆಯಲ್ಲಿ ಲಾಕ್‍ಡೌನ್‍ದಿಂದ ಮುಂದೂಡಲಾಗಿದ್ದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಜೂನ್ ಜೂನ್ 25 ರಿಂದ ಜುಲೈ 4 ರವರೆಗೆ ಜಿಲ್ಲೆಯಾದ್ಯಂತ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆ ನಡೆಯುವ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್‍ನಲ್ಲಿ ಗುರುವಾರ ಎಸ್ ಎಸ್ ಎಲ್ ಸಿ ಪರೀಕ್ಷಾ ಪೂರ್ವ ಸಿದ್ದತೆ ಕುರಿತು ವಿಡಿಯೋ ಸಂವಾಧ ನಡೆಸಿ ಮಾತನಾಡಿದ ಅವರು ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್, ಕೈಗಳಿಗೆ ಸ್ಯಾನಿಟೈಜರ್‍ಮಾಡಿ ಪರೀಕ್ಷಾ ಕೊಠಡಿಗಳಿಗೆ ಕಳುಹಿಸಲಾಗುತ್ತಿರುವದರಿಂದ ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭದ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಬೇಕು ಎಂದು ತಿಳಿಸಿದರು.

ಪರೀಕ್ಷೆಗೆ ಬರುವ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಆರೋಗ್ಯ ತಪಸಣೆಗೆ ಒಳಪಡಿಸಲು ಆರೋಗ್ಯ ಸಹಾಯಕರನ್ನು ನಿಯೋಜಿಸಬೇಕು, ಯಾವುದೇ ಆತಂಕಗಳಿಗೆ ಅವಕಾಶ‌ಮಾಡಿಕೊಡದೆ ಸಮರ್ಥವಾಗಿ ಪರೀಕ್ಷೆ‌ ನಡೆಸಲು ಸಿದ್ಧರಿರಬೇಕೆಂದು ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಇಲಾಖಾ ಮಾರ್ಗದರ್ಶನದಂತೆ ಬೇರೆ ಜಿಲ್ಲೆಯ ಪರೀಕ್ಷಾ ಕೇಂದ್ರದಿಂದ ಆಗಮಿಸಿದ ಹೊಸದಾಗಿ ಪ್ರವೇಶ ಪತ್ರ ತರದೇ ಇರುವದರಿಂದ ಬಂದಿರುವ ಲಿಸ್ಟನ್ನು ಪರಿಶೀಲಿಸಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರುವಂತೆ ತಿಳಿಸಬೇಕು, ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು ಹಾಗೂ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರು 200 ಮಾಸ್ಕಗಳನ್ನು ಇಟ್ಟುಕೊಳ್ಳಬೇಕು ಹಾಗೂ ಪ್ರತಿ ಕೊಠಡಿಯನ್ನು ಸ್ಯಾನಿಟೈಜೇಷನ್ ಮಾಡಬೇಕೆಂದು ತಿಳಿಸಿದರು.

ಪರೀಕ್ಷಾ ದಿನದಂದು ಕೇಂದ್ರದ ಸುತ್ತಮುತ್ತಲೂ 200 ಮೀಟರ್ ನಿಷೇಧಿ ಪ್ರದೇಶವೆಂದು ಘೋಷಿಸಲಾಗುತ್ತಿದೆ. ಈ ವ್ಯಾಪ್ತಿಯಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ನೇಮಕೊಂಡ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದ ವ್ಯಕ್ತಿಗಳಿಗೆ ಪ್ರವೇಶ ನಿಷೇಧವಿರುತ್ತದೆ, ಅಲ್ಲದೇ ಈ ವ್ಯಾಪ್ತಿಯಲ್ಲಿ ಝರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸುವುದಾಗಿ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗುವುದೆಂದು ತಿಳಿಸಿದರು.

ವಿಡಿಯೋ ಸಂವಾದದಲ್ಲಿ ಕಾರವಾರ ಡಿಡಿಪಿಐ ಹರೀಶ ಗಾಂವಕರ್ ಮತ್ತು ಶಿರಸಿ 
ಡಿಡಿಪಿಐ ದಿವಾಕರ ಶೆಟ್ಟಿ, ಸೇರಿದಂತೆ ಆಯಾ ತಾಲೂಕಿನ ತಹಶೀಲ್ದಾರರು, ಪರೀಕ್ಷಾ ಕೇಂದ್ರದ ಮುಖ್ಯ ಅದೀಕ್ಷಕರು ಭಾಗವಹಿಸಿದ್ದರು.

 ಸಂಚಾರಕಕ್ಕೆ ಬಸ್ ವ್ಯವಸ್ಥೆ!

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ದೂರದೂರಿಂದ ಕೇಂದ್ರಕ್ಕೆ ಬರಲು ಬಸ್ ವ್ಯವಸ್ಥೆ ಸಹ ಕಲ್ಪಿಸಲಾಗಿದೆ. ಬಸ್ ಗಳು ಸಂಚರಿಸದ ಪ್ರದೇಶಗಳಿಗೆ ಖಾಸಗಿ ವಾಹನ ವ್ಯವಸ್ಥೆ ಸಹ ಕಲ್ಪಿಸಲಾಗಿದೆ. ಹೊರರಾಜ್ಯದಿಂದ ಬರುವ ಹಾಗೂ ದೂರದ ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟಲ್ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಕಲ್ಪಿಸಿಕೊಟ್ಟಿದೆ‌
ಪರೀಕ್ಷೆಗೆ ಬರುವ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಆರೋಗ್ಯ ತಪಸಣೆಗೆ ಒಳಪಡಿಸಲು ಆರೋಗ್ಯ ಸಹಾಯಕರನ್ನು ನಿಯೋಜಿಸಬೇಕು, ಯಾವುದೇ ಆತಂಕಗಳಿಗೆ ಅವಕಾಶ‌ಮಾಡಿಕೊಡದೆ ಸಮರ್ಥವಾಗಿ ಪರೀಕ್ಷೆ‌ ನಡೆಸಲು ಸಿದ್ಧರಿರಬೇಕೆಂದು ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಇಲಾಖಾ ಮಾರ್ಗದರ್ಶನದಂತೆ ಬೇರೆ ಜಿಲ್ಲೆಯ ಪರೀಕ್ಷಾ ಕೇಂದ್ರದಿಂದ ಆಗಮಿಸಿದ ಹೊಸದಾಗಿ ಪ್ರವೇಶ ಪತ್ರ ತರದೇ ಇರುವದರಿಂದ ಬಂದಿರುವ ಲಿಸ್ಟನ್ನು ಪರಿಶೀಲಿಸಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರುವಂತೆ ತಿಳಿಸಬೇಕು, ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು ಹಾಗೂ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರು 200 ಮಾಸ್ಕಗಳನ್ನು ಇಟ್ಟುಕೊಳ್ಳಬೇಕು ಹಾಗೂ ಪ್ರತಿ ಕೊಠಡಿಯನ್ನು ಸ್ಯಾನಿಟೈಜೇಷನ್ ಮಾಡಬೇಕೆಂದು ತಿಳಿಸಿದರು.

ಪರೀಕ್ಷಾ ದಿನದಂದು ಕೇಂದ್ರದ ಸುತ್ತಮುತ್ತಲೂ 200 ಮೀಟರ್ ನಿಷೇಧಿ ಪ್ರದೇಶವೆಂದು ಘೋಷಿಸಲಾಗುತ್ತಿದೆ. ಈ ವ್ಯಾಪ್ತಿಯಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ನೇಮಕೊಂಡ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದ ವ್ಯಕ್ತಿಗಳಿಗೆ ಪ್ರವೇಶ ನಿಷೇಧವಿರುತ್ತದೆ, ಅಲ್ಲದೇ ಈ ವ್ಯಾಪ್ತಿಯಲ್ಲಿ ಝರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸುವುದಾಗಿ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗುವುದೆಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್ ಅವರು ಮಾತನಾಡಿ, ಕಾರವಾರದಲ್ಲಿ ಪರೀಕ್ಷಾ ಕೇಂದ್ರಗಳು 35+5 ಮತ್ತು ಶಿರಸಿಯಲ್ಲಿ 35 ಪರೀಕ್ಷಾ ಕೇಂದ್ರಗಳನ್ನು ಮಾಡಲಾಗುತ್ತಿದೆ.  ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಲು ತಿಳಿಸಿದರು.