ಕಾರವಾರ :ಜಿಲ್ಲಾ ಪ್ರವಾಸದಲ್ಲಿರುವ ಕೆ.ಪಿ.ಸಿ.ಸಿ ಅಧ್ಯಕ್ಷರ ಡಿ.ಕೆ ಶಿವಕುಮಾರ್ ಅವರನ್ನು ಇಂದು ಕಾರವಾರದಲ್ಲಿ ಕಾರ್ಯಕರ್ತರು ಭೇಟಿಯಾದರು ಪುಷ್ಪ ಗುಚ್ಚ ನೀಡಿ ಸ್ವಾಗತಿಸಿದರು.
ಮುಂಬರುವ ಗ್ರಾಮಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಕ್ರಾಂಗ್ರೇಸ್ ಕಾರ್ಯಕರ್ತರ ಸಮಾರಂಭದ ಹಿನ್ನಲೆಯಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ನಗರಕ್ಕೆ ಆಗಮಿಸಿದ್ದು ಅವರನ್ನು ಸ್ಥಳಿಯ ಕಾಂಗ್ರೆಸ್ ನಾಯಕರು ಪುಷ್ಪ ನೀಡಿ ಸ್ವಾಗತಿಸಿದರು. ನಾಳೆ ಶಿರಸಿ ಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾರಂಭದಲ್ಲಿ ಭಾಗಿಯಾಗುವ ಡಿ.ಕೆ. ಶಿವಕುಮಾರ್ ಅವರು ಇಂದು ಕಾರವಾರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಕಾರವಾರದ ಕೂರ್ಮಗಡ ನಡುಗಡ್ಡೆಯ ರೆಸಾರ್ಟ್ ನಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.