ಕುಮಟಾ:ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ. ಪಿ ಅವರು ಏ.೧೭ ಕುಮಟಾ ತಾಲೂಕಿನ ಉಪ್ಪಿನ ಪಟ್ಟಣ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಗ್ರಾಮೀಣ ಜನರ ಹಲವಾರು ಕುಂದುಕೊರತೆಗಳಿಗೆ ಸ್ಥಳದಲ್ಲಿಯೆ ಸೂಕ್ತ ಪರಿಹಾರ ನೀಡಲು ರಾಜ್ಯ ಸರ್ಕಾರದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಪರಿಕಲ್ಪನೆಯಡಿ ಗ್ರಾಮವಾಸ್ತವ್ಯ ಮಾಡಲಿದ್ದು ಅಂದು ಜಿಲ್ಲಾಧಿಕಾರಿಗಳು ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ಗ್ರಾಮದಲ್ಲಿಯೇ ಇದ್ದು ಗ್ರಾಮದ ಜನರ ಅಳಲನ್ನು ಆಲಿಸಿ ಪರಿಹಾರ ಕಲ್ಪಿಸಲಿದ್ದಾರೆ. ಜಿಲ್ಲಾಧಿಕಾರಿಗಳೊಂದಿಗೆ ಕುಮಟಾ ಸಹಾಯಕ ಆಯುಕ್ತರಾದ ಅಜಿತ. ಎಂ ತಹಶೀಲ್ದಾರ ಮೇಘರಾಜ ನಾಐಕ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿರಲಿದ್ದಾರೆ.
ಆಧಾರ ಕಾರ್ಡ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಆನ್‌ಲೈನ್ ಮುಖಾಂತರ ಪಡೆಯುವ ಬಗ್ಗೆ ನಿರಂತರ ಮತದಾರರ ಪಟ್ಟಿ ಪರಿಷ್ಕರಣೆ, ಉದ್ಯೋಗ ಖಾತ್ರಿ ಯೋಜನೆ ವಸತಿ ಯೋಜನೆ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಸರರ್ಕಾರದಿಂದ ಸಾರ್ವಜನಿಕರಿಗೆ ಸಿಗಬಹುದಾದ ವಿವಿಧ ಇಲಾಖೆಗಳ ಸವಲತ್ತುಗಳ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಲಿದ್ದಾರೆ
ಗ್ರಾಮಸ್ಥರು ತಮ್ಮ ಕುಂದುಕೊರತೆಗಳ ಪರಿಹಾರಕ್ಕೆ ಅಗತ್ಯ ಸೂಕ್ತ ದಾಖಲೆಗಳೊಂದಿಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ