Header Ads Widget

Koojalli times ನಲ್ಲಿ ಪ್ರಸಾರವಾಗುವ ವಿವಿಧ ಬಗೆಯ ಕಾರ್ಯಕ್ರಮಗಳನ್ನು ವಿಕ್ಷೀಸಲು ನಮ್ಮ (facebook page), (youtube channel), (instagram), (twitter page) ಗಳನ್ನು follow ಮಾಡಿ

ಗೇರು ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷರಾದ ಶಂಭು ಗೌಡ ಗುಣವಂತೆ ಇನ್ನಿಲ್ಲ

ಹೊನ್ನಾವರ: ಜಿಲ್ಲೆಯ ಕಂಡ  ಹಿರಿಯ ರಾಜಕಾರಣಿ, ಒಕ್ಕಲಿಗರ ಸಮಾಜದ ಹಿರಿಯ ಮುಖಂಡ ಶಂಭು ಗೌಡ ಗುಣವಂತೆ (76) ಅವರು ಕರೋನಾ ಸೋಂಕಿಗೆ ತುತ್ತಾಗಿ ಸಾವನಪ್ಪಿದ್ದಾರೆ. ಜಿ.ಪಂ ಸದಸ್ಯರಾಗಿ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದ್ದರು

ಕಳೆದ ಮೂರ‍್ನಾಲ್ಕು ದಿನಗಳಿಂದ ಜ್ಚರ ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ತಾಲೂಕಾಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆ ತೀವೃವಾಗಿದ್ದರಿಂದ ತಕ್ಷಣ ಪಟ್ಟಣದ ಖಾಸಗಿ ಆಸ್ಪತ್ರೆಗೆ ಸೇರಿಸಿದರು. ಗಂಭೀರ ಉಸಿರಾಟದ ತೊಂದರೆಯಿಂದ ಇಹಲೋಕ ತ್ಯಜಿಸಿದ್ದಾರೆ.

ಮೊದಲು ರಾಜಕೀಯವಾಗಿ, ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಶಂಭು ಗೌಡರು ದೇವೆಗೌಡರ ಆಪ್ತರಾಗಿದ್ದರು, ಜಿಲ್ಲೆಯ ಒಕ್ಕಲಿಗ ಸಮುದಾಯಕ್ಕೆ ಗಣನೀಯ ಪ್ರಮಾಣದಲ್ಲಿ ಕೊಡುಗೆಯನ್ನು ನೀಡುವಲ್ಲಿ ಹಗಲಿರುಳು ಶ್ರಮಿಸಿದರು. 


 ಅವರು ನಿಗಮಮಂಡಳಿಯ ಸದಸ್ಯರಾಗಿ  ಅನೇಕ ಜನಪರ ಕಾರ್ಯಕ್ರಮವನ್ನು ನೀಡಿದ್ದಾರೆ. ನಂತರ ಆರ್.ವಿ.ದೇಶಪಾಂಡೆ ಪ್ರಭಾವಕ್ಕೆ ಒಳಗಾಗಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಈಗಲೂ ಹೊನ್ನಾವರ  ತಾಲೂಕಿನ ಒಕ್ಕಲಿಗ ಸಮುದಾಯದ ಜೊತೆಗೆ ಇತರ ಸಮಾಜದ ಪ್ರೀತಿ ವಿಶ್ವಾಸಕ್ಕೆ ಕಾರಣರಾಗಿದ್ದರು.
ಕಳೆದ ವಿಧಾನಸಭಾ ಚುನಾವಣೆಯ ಹೊಸ್ತಿನಲ್ಲಿ ಕಾಂಗ್ರೆಸ್ ತೊರೆದು ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರಿದ್ದ  ಇವರು ಚುನಾವಣೆಯಲ್ಲಿ ಬಿ.ಜೆ.ಪಿಯನ್ನು ಬೆಂಬಲಿಸುವ  ಮೂಲಕ ಹಾಲಿ ಶಾಸಕ ಸುನಿಲ್ ನಾಯ್ಕ ಆಪ್ತರಾಗಿ ಗುರುತಿಸಿಕೊಂಡಿದ್ದರು. ಜಿಲ್ಲೆಯ ಅಪಾರವಾದ ಅಭಿಮಾನಿ ಬಳಗವನ್ನು, ಕುಟುಂಬವನ್ನು, ಹಿತೈಷಿಗಳನ್ನು ಅಗಲಿದ್ದಾರೆ. ಭಟ್ಕಳ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಗದೀಪ ತೆಂಗೇರಿ, ಜೆಡಿಎಸ್ ಮುಖಂಡರಾದ ಸೂರಜ್ ನಾಯ್ಕ ಸೋನಿ , ಸೇರಿದಂತೆ ನೂರಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.