Header Ads Widget

Koojalli times ನಲ್ಲಿ ಪ್ರಸಾರವಾಗುವ ವಿವಿಧ ಬಗೆಯ ಕಾರ್ಯಕ್ರಮಗಳನ್ನು ವಿಕ್ಷೀಸಲು ನಮ್ಮ (facebook page), (youtube channel), (instagram), (twitter page) ಗಳನ್ನು follow ಮಾಡಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂ.14 ರಿಂದ 21 ರ ವರೆಗೆ ಲಾಕ್ ಡೌನ್ ಸಡಿಲಿಕೆ- ಜಿಲ್ಲಾಧಿಕಾರಿ

ಕಾರವಾರ : ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ. 
ಅನುಮತಿಸಲಾದ ಚಟುವಟಿಕೆಗಳು ಬೆಳಿಗ್ಗೆ 08 ರಿಂದ 2 ಗಂಟೆಯವರೆಗೆ ಇರಲಿದ್ದು, ಶನಿವಾರ ಮತ್ತು ಭಾನುವಾರ ವೀಕೆಂಡ್ ಲಾಕ್ ಡೌನ್ ಮುಂದುವರೆಯಲಿದ್ದು ಲಾಕ್ ಡೌನ್ ಸಡಿಲಿಕೆ ಬಗ್ಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ನವರು ಆದೇಶ ಹೊರಡಿಸಿದ್ದಾರೆ.


ಈ ಬಗ್ಗೆ ಮಾಧ್ಯಮಗಳೊಂದಿಗೆ ಗೂಗಲ್ ಮೀಟ್ ಮೂಲಕ ಮಾಹಿತಿ ನೀಡಿದರು. ಅವರು ಜಿಲ್ಲೆಯಲ್ಲಿ
ಜಿಲ್ಲೆಯಾಧ್ಯಾಂತ ನೈಟ್ ಕರ್ಫೂ ಮುಂದುವರಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಮೈಕ್ರೋ ಕಂಟೈನ್ಮೆಂಟ್ ಝೋನ್ ನಲ್ಲಿ ಎಂದಿನಂತೆ ಲಾಕ್ ಡೌನ್ ಮುಂದುವರಿಕೆ ಮಾಡಲಾಗಿದೆ. ಈ ಪ್ರದೇಶಗಳಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯುವಂತಿಲ್ಲ. ಹಾಗೂ ಸ್ಥಳೀಯ ಆಡಳಿತ ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸುವ ವ್ಯವಸ್ಥೆ ಇದೆ.

ಮುಂದಿನ ಆದೇಶದ ವರೆಗೆ ಮದುವೆ ಹಾಗೂ ಯಾವುದೇ ಸಮಾರಂಭಕ್ಕೆ ಅನುಮತಿ ಇಲ್ಲ. ಗೋವಾ-ಕರ್ನಾಟಕ ಗಡಿಯಲ್ಲಿ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಲ್ಲ, ಪಾರ್ಕ ಗಳಲ್ಲಿ ಬೆಳಗ್ಗೆ 5 ರಿಂದ 10 ಘಂಟೆ ವರೆಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ.ಜಿಲ್ಲಾ ಗಡಿಯಲ್ಲಿ ತಪಾಸಣೆ ಮುಂದುವರಿಯಲಿದೆ. ಜನ ಹೆಚ್ಚು ಸೇರದಂತೆ ನಿಯಮಗಳನ್ನು ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲಾಕ್ ಡೌನ್ ಸಡಿಲಿಕೆ ಯಲ್ಲಿ ಯಾವುದಕ್ಕೆ ಅವಕಾಶ ಇದೆ ಇಲ್ಲಿದೆ ನೋಡಿ