ಹೊನ್ನಾವರ : ಜಿಲ್ಲೆಯ ಸಂಸದ ಅನಂತ ಕುಮಾರ ಹೆಗಡೆ ಜನರ ಕಣ್ಣಿಗೆ ಕಾಣಿಸದೇ ಭೂಗತರಾಗಿದ್ದು, ಅವರನ್ನು ಹುಡುಕಿಕೊಟ್ಟವರಿಗೆ ಯೋಗ್ಯ ಬಹುಮಾನ ನೀಡಲಾಗುವುದು ಎಂದು ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಕರ್ನಾಟಕದ ಕುವರ ಬಿ. ವಿ. ಶ್ರೀನಿವಾಸ ಹೇಳಿದ್ದಾರೆ.
ಇನ್ನೂ ಕೋರೊನಾ ಸಮಸ್ಯೆ ಎದುರಿಸುವಲ್ಲಿ ಕೇಂದ್ರ ಮತ್ತು ರಾಜ್ಯದ ಬಿ.ಜೆ.ಪಿ. ಸರಕಾರ ವಿಫಲವಾಗಿದ್ದೂ, ಮೋದಿ ಮತ್ತು ಯಡಿಯೂರಪ್ಪಾ ಸರಕಾರ ಬರೇ ಪೊಳ್ಳು ಭರವಸೆ ನೀಡುತ್ತಾ ಸಂಕಷ್ಟದಲ್ಲಿರುವ ಜನರ ನೆರವಿಗೆ ಬಂದಿಲ್ಲ ಎಂದು ಆರೋಪಿಸಿದರು.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆದೇಶದಂತೆ, ಕೋರೊನಾ ಸಂಸೃಸ್ತರ ನೆರವಿಗೆ ಪಕ್ಷ ಭೇದ ಮರೆತು ಯುವ ಕಾಂಗ್ರೆಸ್ ಕಾರ್ಯಕರ್ತರು ದಾವಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ದೇಶವ್ಯಾಪಿ ಸಂಚರಿಸಿ ಕೋರೊನಾ ಪೀಡಿತರಿಗೆ ಸಹಾಯ ಹಸ್ತ ಚಾಚಿ, ಅವರ ನೆರವಿಗೆ ಶ್ರಮಿಸುತ್ತಿರುವ ಶ್ರೀನಿವಾಸ ಅವರ ಸೇವೆಯನ್ನು ಪರಿಗಣಿಸಿ, ಹೊನ್ನಾವರ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಮಾಜಿ ಜಿ.ಪಂ ಸದಸ್ಯ ಕೃಷ್ಣ ಗೌಡ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಎನ್. ಸುಬ್ರಹ್ಮಣ್ಯ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಬ್ದುಲ್ ಮಲ್ಲಿಕ್, ಕಾಂಗ್ರೆಸ್ ಮುಖಂಡರಾದ ಬಾಲು ನಾಯ್ಕ, ಹನೀಫ್ ಶೇಖ್, ರಾಜು ನಾಯ್ಕ, ಮಂಕಿ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ,ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ ಶೆಟ್ಟಿ, ಇನ್ನಿತರಿದ್ದರು