Header Ads Widget

Koojalli times ನಲ್ಲಿ ಪ್ರಸಾರವಾಗುವ ವಿವಿಧ ಬಗೆಯ ಕಾರ್ಯಕ್ರಮಗಳನ್ನು ವಿಕ್ಷೀಸಲು ನಮ್ಮ (facebook page), (youtube channel), (instagram), (twitter page) ಗಳನ್ನು follow ಮಾಡಿ

ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿ ಅಗ್ನಿ ಅವಘಡ: | ಬೆಂಕಿ ನಂದಿಸಲು ಹರಸಾಹಸ ಪಟ್ಟ ಅಗ್ನಿಶಾಮಕ ಸಿಬ್ಬಂದಿ


ಕಾರವಾರ:ಜಿಲ್ಲಾ ಪಂಚಾಯಿತಿಯ ಅಭಿಲೇಖಾಲಯದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೂರು ಮಹಡಿಯ ಕಟ್ಟಡ ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬೆಳಿಗ್ಗೆ ಸಂಭವಿಸಿದೆ.
ಕಾರವಾರದ ಜಿಲ್ಲಾ ಪಂಚಾಯಿತಿ ಹಿಂಭಾಗದಲ್ಲಿರುವ ಅಭಿಲೇಖಾಲಯದಲ್ಲಿ ಶಾರ್ಟ್ ಸರ್ಕ್ಯೂಟ್​​​ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು  ತಿಳಿದು ಬಂದಿದೆ. ಬೆಂಕಿಯು ಕಟ್ಟಡದ ಮೂರು ಮಹಡಿಗೂ ಆವರಿಸಿಕೊಂಡಿದ್ದು ಕಟ್ಟಡದಲ್ಲಿ ಜಿಲ್ಲಾ ಪಂಚಾಯಿತಿಯ ದಾಖಲಾತಿಗಳನ್ನು ಇಡಲಾಗಿದ್ದು, ಕೆಲವು ದಾಖಲಾತಿಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ.
ಅಗ್ನಿ ಅವಘಡವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಸಿಇಒ ಪ್ರಿಯಾಂಗ್​ ಎಂ. ಹಾಜರಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.