ಅಂಕೋಲಾ: ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ವಾಸರ ಕುದ್ರಿಗೆಯ ಧನ್ಯಾ ನೀಲಕಂಠ ನಾಯಕ ಚಿವರು ಡಿವೈಎಸ್ಪಿ ಹುದ್ದೆಗೆ ಆಯ್ಕೆಯಾಗಿದ್ದಾರೆ.
ವಾಸರ ಕುದ್ರಗಿಯ ನೀಲಕಂಠ ನಾಯಕ ಹಾಗೂ ಶೋಭಾ ನಾಯಕ ತೊರ್ಕೆ ದಂಪತಿಗಳ ಮಗಳಾಗಿದ್ದ ಇವರು ಪ್ರಪ್ರಥಮ ಮಹಿಳಾ ಪೊಲೀಸ್ ಅಧಿಕಾರಿಯಾಗಿ ಆಯ್ಕೆ ಆಗುವ ಮೂಲಕ ಇವರು ತಾಲೂಕಿಗೆ ಹಾಗೂ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಧನ್ಯಾ ನೀಲಕಂಠ ನಾಯಕ ಅವರು ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೋಲಿಸ್ ಹುದ್ದೆಗೆ ನೇಮಕಗೊಂಡಿದ್ದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 19 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಧನ್ಯಾ ನಾಯಕ ಅವರು, 2019-20ರಲ್ಲಿ ನಡೆದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಡಿವೈಎಸ್ಪಿ ಹುದ್ದೆಗೆ ಆಯ್ಕೆಯಾಗಿದ್ದು, ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ 35ನೇ ತಂಡದ ಪ್ರಶಿಕ್ಷಣಾರ್ಥಿಗಳಲ್ಲಿ ಸರ್ವೋತ್ತಮ ಮಹಿಳಾ ಪ್ರಶಿಕ್ಷಣಾರ್ಥಿ ಎನ್ನುವ ಗೌರವಕ್ಕೆ ಪಾತ್ರರಾದವರು.