Header Ads Widget

Koojalli times ನಲ್ಲಿ ಪ್ರಸಾರವಾಗುವ ವಿವಿಧ ಬಗೆಯ ಕಾರ್ಯಕ್ರಮಗಳನ್ನು ವಿಕ್ಷೀಸಲು ನಮ್ಮ (facebook page), (youtube channel), (instagram), (twitter page) ಗಳನ್ನು follow ಮಾಡಿ

ಮುಖ್ಯಮಂತ್ರಿ ನೇತೃತ್ವದಲ್ಲಿ ಜಲಸಾರಿಗೆ ಮಂಡಳಿ ಸಭೆ; ಮೀನುಗಾರರ ಬೆನ್ನಿಗೆ ನಿಂತ ಸಂಸದ ಅನಂತಕುಮಾರ ಹೆಗಡೆ

ಬೆಂಗಳೂರು: ಕರ್ನಾಟಕ ಜಲಸಾರಿಗೆ ಮಂಡಳಿಯ 5ನೇ ಸಭೆಯು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಸದ ಅನಂತಕುಮಾರ ಹೆಗಡೆ ಮಾತನಾಡಿ, ಸಾಗರಮಾಲಾ ಯೋಜನೆಯಡಿಯಲ್ಲಿ ಕರಾವಳಿ ಭಾಗದಲ್ಲಿ ಬಂದರುಗಳು ನಿರ್ಮಾಣವಾಗುತ್ತಿದ್ದು ಉದ್ಯೋಗ ಸೃಷ್ಟಿ, ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ, ಇದರಿಂದ ಜಿಲ್ಲೆಯ ಹಾಗೂ ರಾಜ್ಯದ ಆರ್ಥಿಕ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ವೇಗದಲ್ಲಿ ಅಭಿವೃದ್ಧಿಯಾಗಲಿದೆ ಎಂಬ ವಿಶ್ವಾಸವನ್ನು ಸಂಸದರು ವ್ಯಕ್ತಪಡಿಸಿದರು. 
ಮೀನುಗಾರರಿಗೆ ಯಾವುದೇ ತೊಂದರೆಯಾಗದಂತೆ ಅವರನ್ನು ಒಕ್ಕಲೆಬ್ಬಿಸದೇ ಅವರೊಂದಿಗೆ ಸಮನ್ವಯ ಸಾಧಿಸಿಕೊಂಡು ಯೋಜನೆಯನ್ನು ಅನುಷ್ಠಾನ ಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. 

ಅಂಕೋಲಾ ತಾಲ್ಲೂಕಿನ ಬೇಲಿಕೇರೆಯಲ್ಲಿ 40 ಮೆಟ್ರಿಕ್ ಟನ್ ಸರಕು ಸಾಮರ್ಥ್ಯದ 3997 ಕೋಟಿ ವೆಚ್ಚದ ಬಂದರು ಹಾಗೂ ಹೊನ್ನಾವರ ತಾಲ್ಲೂಕಿನ ಪಾವಿನಕುರ್ವೆಯಲ್ಲಿ 14 ಮೆಟ್ರಿಕ್ ಟನ್ ಸರಕು ಸಾಮರ್ಥ್ಯದ 1967 ಕೋಟಿ ರೂಪಾಯಿ ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದ ಬಂದರನ್ನು ಅಭಿವೃದ್ಧಿಪಡಿಸಲು ಇಂದಿನ ಸಭೆಯಲ್ಲಿಸರಕಾರವು ಹಸಿರು ನಿಶಾನೆ ತೋರಿದೆ.
ಬೇಲಿಕೇರಿ ಹಾಗೂ ಪಾವಿನಕುರ್ವೆ ಬಂದರುಗಳನ್ನು ಅಭಿವೃದ್ಧಿಪಡಿಸಲು ಕರ್ನಾಟಕ ಜಲಸಾರಿಗೆ ಮಂಡಳಿಯು ಅನುಮೋದನೆ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಸಂಸದ ಹೆಗಡೆ ಮುಖ್ಯಮಂತ್ರಿಗಳಿಗೆ ಹಾಗೂ ಮಾನ್ಯ ಮೀನುಗಾರಿಕಾ ಸಚಿವ ಎಸ್.ಅಂಗಾರಗೆ ಅಭಿನಂದನೆ ಸಲ್ಲಿಸಿದ್ದಾರೆ.