ಶಾಲೆಯಿಂದ ಬಾಲಕಿಯನ್ನ ಮನೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಆಕೆಯ ಹತ್ತಿರದ ಸಂಬಂಧಿ ಯುವಕ ನಿರ್ಜನ ಅರಣ್ಯ ಪ್ರದೇಶದಲ್ಲಿ ಅಚ್ಯಾರ ಮಾಡಿರುವ ಬಗ್ಗೆ ಬಾಲಕಿಯ ತಂದೆ ಸಿದ್ದಾಪುರ ಪೊಲೀಸ್ ಠಾಯಲ್ಲಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆ ಕೈಕೊಂಡಿದ್ದ ಸಿದ್ದಾಪುರ ಪೊಲೀಸರು ಆರೋಪಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿರುವ ಹಿನ್ನಲೆಯಲ್ಲಿ ಆರೋಪಿಯನ್ನ ಕಾರಾಗೃಹಕ್ಕೆ ಕರೆತರಲಾಗಿದೆ.