ಅಂಕೋಲಾ:ಹುಬ್ಬಳ್ಳಿ ಕಡೆಯಿಂದ ಅಂಕೋಲಾಕ್ಕೆ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಹೆಬ್ಬುಳ ಸಮೀಪ ನಡೆದಿದೆ.
ಟಾಟಾ ಟಿಯಾಗೋ ಕಂಪನಿಗೆ ಸೇರಿದ್ದ ಕಾರು ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕಕ್ಕೆ ಪಲ್ಟಿಯಾಗಿದೆ.ಬೆಂಕಿ ಬಿದ್ದಿರುವ ಸುದ್ದಿ ತಿಳಿಯುತ್ತಿದ್ದಂತೆ ಅಂಕೋಲಾದ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಆದ್ರೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.