ಕುಮಟಾ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್(ರಿ ) ಬಿಜಿಎಸ್ ಕೇಂದ್ರೀಯ ವಿದ್ಯಾಲಯ ಮಿರ್ಜಾನ್ನಲ್ಲಿ, ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು. ಮೊದಲು ಶಾಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಶ್ರಮದಾನದ ಮೂಲಕ ಶಾಲೆಯ ಆವರಣ, ಮೈದಾನ, ಉದ್ಯಾನವನ, ಮಠ ಮತ್ತು ಗೋ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯೆಯಾದ ಶ್ರೀಮತಿ ಲೀನಾ ಗೊನೆಹಳ್ಳಿಯವರು ಗಾಂಧೀಜಿಯವರ ತತ್ವ ಆದರ್ಶಗಳ ಬಗ್ಗೆ, ಶಾಸ್ತ್ರೀಜಿಯವರ ಪ್ರಾಮಾಣಿಕತೆ ನಿಷ್ಠೆಯ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳೆಲ್ಲರೂ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ವಿದ್ಯಾರ್ಥಿನಿಯಾದ ಕುಮಾರಿ ಶ್ರೀಶ ಆಚಾರ್ಯ ಕಾರ್ಯಕ್ರಮವನ್ನು ನಿರೂಪಿಸಿದಳು.
ಕುಮಾರಿ ಸಂಜನಾ ಪಟಗಾರ ಸ್ವಾಗತಿಸಿದಳು. ವಿದೂಷಿ ಶ್ರೀಮತಿ ರಂಜನ ಆಚಾರ್ಯ ಹಾಗೂ ಸಂಗಡಿಗರು ಭಜನೆಯನ್ನು ಮಾಡಿದರು. ವಿದ್ಯಾರ್ಥಿನಿ ಮೈಥಿಲಿ ಹಾಗೂ ಸಂಗಡಿಗರು ಗಾಂಧೀಜಿಯವರ ಕುರಿತಾದ ಕಿರು ನಾಟಕವನ್ನು ಪ್ರದರ್ಶಿಸಿದರು. ಸಭಾ ಕಾರ್ಯಕ್ರಮದ ವಂದನಾರ್ಪಣೆಯನ್ನು ಕುಮಾರ್ ಅಕ್ಷಯ್ ಪಟಗಾರ ನೆರವೇರಿಸಿಕೊಟ್ಟರು.