ಹೊನ್ನಾವರ : ಹೊನ್ನಾವರದ ಜನತೆಗೆ ಪರಮಾಪ್ತರಂತೆ ಇದ್ದ, ಜನತೆಯ ಕಷ್ಟಕ್ಕೆ ಸದಾ ಸ್ಪಂದಿಸುತ್ತಾ ಜನತೆಗೆ ಒಂದಾಗಿ ಉತ್ತಮ ನಾಯಕರಾಗಿ ಕಳಿಸಿದ್ದ, ಬಿಜೆಪಿಯ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕ ಎಂ.ಪಿ.ಇ ಸೊಸೈಟಿಯ ಅಧ್ಯಕ್ಷ ಡಾ. ಎಂ.ಪಿ ಕರ್ಕಿ ಇಹಲೋಕ ತ್ಯಜಿಸಿದ್ದಾರೆ. ಬಡವರ ಡಾಕ್ಟರ್ ಎಂದೆ ಪ್ರಸಿದ್ಧಿ ಪಡೆದ ಇವರು ವೈದ್ಯವೃತ್ತಿಯನ್ನು ಅತ್ಯಂತ ಪ್ರೀತಿಯಿಂದ ಹಾಗೂ ಸಾರ್ವಜನಿಕ ಸೇವೆಗೋಸ್ಕರ ನಡೆಸಿದ್ದನ್ನು ಹೊನ್ನಾವರದ ಜನತೆ ಸ್ಮರಿಸಿಕೊಳ್ಳುತ್ತಾರೆ.
ವಯೋಸಹಜ ಕಾಯೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಜನಸಂಘದ ಕಾಲದಿಂದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ ಪಕ್ಷದ ಅತ್ಯಂತ ಕಷ್ಟ ಕಾಲದಲ್ಲಿ 18 ವರ್ಷಗಳ ವರೆಗೆ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರಾಗಿದ್ದರು. ಒಮ್ಮೆ ರಾಜ್ಯ ಕಾರ್ಯದರ್ಶಿಯಾಗಿ 1983ಹಾಗೂ ಎರಡನೇ ಬಾರಿ 1994ರಲ್ಲಿ ಕುಮಟಾ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ, ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಷ್ಟಿತ ಸಂಸ್ಥೆ ಯಾದಂತ ಶ್ರೀ ಧರ್ಮಸ್ಥಳ ಮಂಜುನಾಥೆಶ್ವರದ 40 ವರ್ಷಗಳ ವರೆಗೆ ಸೇವೆ ಸಲ್ಲಿಸಿರುವ ಡಾ. ಎಂ.ಪಿ ಕರ್ಕಿ(87) ಇಂದು ನಮ್ಮನ್ನೆಲ್ಲ ಅಗಲಿದ್ದಾರೆ, ಶ್ರೀಯುತರು ಪತ್ನಿ, ಪುತ್ರಿ, ಪುತ್ರ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.