ಹಾನಗಲ್: ರಾಜ್ಯದ ಹಾವೇರಿ ಜಿಲ್ಲೆಯ ಹಾನಗಲ್ ಹಾಗೂ ವಿಜಯಪುರ ಜಿಲ್ಲೆಯ ಸಿಂದಗಿಯ ವಿಧಾನ ಸಭಾ ಕ್ಷೇತ್ರಕ್ಕೆ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗು ಪಡೆದುಕೊಂಡಿದೆ. 2 ವಿಧಾನಸಭಾ ಕ್ಷೇತ್ರದ ಚುನಾವಣೆ 3 ರಾಜಕೀಯ ಪಕ್ಷಗಳ ಪ್ರತಿಷ್ಠೆ ಯಾಗಿ ಮಾರ್ಪಟ್ಟಿದೆ.
ಹಾನಗಲ್ ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಪ್ರಚಾರ ಸಭೆಗೆ ಜೆಡಿಎಸ್ ಅಭ್ಯರ್ಥಿ ಪರ ಉತ್ತರ ಕನ್ನಡ ಜಿಲ್ಲೆಯಿಂದ ಜೆಡಿಎಸ್ ಮುಖಂಡರಾದ ಸೂರಜ್ ನಾಯ್ಕ ಸೋನಿ, ಜಿಲ್ಲಾಧ್ಯಕ್ಷರಾದ ಗಣಪಯ್ಯ ಗೌಡ, ಕುಮಟಾ ತಾಲೂಕಾಧ್ಯಕ್ಷರಾದ ಸಿ.ಜಿ ಹೆಗಡೆ, ಹಾಗೂ ಶಿವರಾಮ್ ಮಡಿವಾಳ,ಜಿ.ಕೆ ಪಟಗಾರ
ಇತರರು ಜೆಡಿಎಸ್ ಅಭ್ಯರ್ಥಿಗೆ ಮತ ನೀಡುವಂತೆ ಪ್ರಚಾರ ನಡೆಸಿದರು.
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ರೈತರ ಸಾಲ ಮನ್ನಾ, ಸೇರಿದಂತೆ ಹಲವು ಜನಪರ ಕಾರ್ಯಕ್ರಮ ಬಗ್ಗೆ ಮತದಾರರಿಗೆ ತಿಳಿಸಿದರು.