Header Ads Widget

Koojalli times ನಲ್ಲಿ ಪ್ರಸಾರವಾಗುವ ವಿವಿಧ ಬಗೆಯ ಕಾರ್ಯಕ್ರಮಗಳನ್ನು ವಿಕ್ಷೀಸಲು ನಮ್ಮ (facebook page), (youtube channel), (instagram), (twitter page) ಗಳನ್ನು follow ಮಾಡಿ

ಏ.10ರಂದು ಲಾಯನ್ಸ್ ರೇವಣಕರ್ ಕಣ್ಣಿನ ಆಸ್ಪತ್ರೆಯ ವಿಸ್ತೃತ ಕಟ್ಟಡ ಮತ್ತು ಆಧುನಿಕ ಸೌಲಭ್ಯಗಳ ಉದ್ಘಾಟನಾ ಸಮಾರಂಭ


ಕುಮಟಾ: ಕಳೆದ ಅನೇಕ ವರ್ಷಗಳಿಂದ ಸಾರ್ವಜನಿಕ ಸೇವೆ ಹಾಗೂ ವಿವಿದ ಸಮಾಜಮುಖಿ ಕಾರ್ಯಗಳ ಮೂಲಕ ಮೆಚ್ಚುಗೆ ಪಡೆದಿರುವ ಪಟ್ಟಣದ ಬಗ್ಗೋಣ ರಸ್ತೆಯ ವಿದ್ಯಾಗಿರಿಯಲ್ಲಿರುವ ಲಾಯನ್ಸ್ ರೇವಣಕರ್ ಕಣ್ಣಿನ ಆಸ್ಪತ್ರೆಯ ವಿಸ್ತೃತ ಕಟ್ಟಡ ಮತ್ತು ಆಧುನಿಕ ಸೌಲಭ್ಯಗಳ ಉದ್ಘಾಟನಾ ಸಮಾರಂಭ ಇದೇ ಏ.10 ರಂದು ಮಧ್ಯಾಹ್ನ 4.30 ಘಂಟೆಗೆ ನಡೆಯಲಿದೆ. ಈ ಬಗ್ಗೆ ಆಸ್ಪತ್ರೆ ಆವಾರದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರು ಮಾಹಿತಿ ನೀಡಿದರು.
ಲಯನ್ಸ್ ಹ್ಯುಮೆನಿಟೇರಿಯನ್ ಸರ್ವಿಸ್ ಟ್ರಸ್ಟ್ ನ ಅಧ್ಯಕ್ಷರಾದ ದೇವಿದಾಸ ಶೇಟ್ ಸರ್ವರನ್ನೂ ಸ್ವಾಗತಿಸುತ್ತಾ ಮಾತನ್ನಾಡಿ ಕಳೆದ 45 ವರ್ಷಗಳಿಂದ ಬಡವವರಿಗೆ ಜಾತಿ ಬೇಧ ಭಾವವಿಲ್ಲದೆ ಜಿಲ್ಲೆಯ ಜನತೆಗೆ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇವೆ. ಲಯನ್ಸ್ ಕಣ್ಣಿನ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದಂತೆ ದಾನಿಗಳ ಸಹಕಾರದಲ್ಲಿ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು
ಆಸ್ಪತ್ರೆಯಲ್ಲಿ ಅಳವಡಿಸಿಕೊಳ್ಳುವ ಜೊತೆಗೆ ಕಟ್ಟಡವನ್ನು ಕೂಡ ವಿಸ್ತರಿಸಿದ್ದೇವೆ ಎಂದು ಹೇಳಿದರು.
ಆಸ್ಪತ್ರೆಯ ಆಡಳಿತಾಧಿಕಾರಿ ಜಯದೇವ ಬಳಗಂಡಿ ಮಾತನಾಡಿ, ಆಸ್ಪತ್ರೆಯ ವಿಸ್ತ್ರತ ಕಟ್ಟಡ ಮತ್ತು ಆಧುನಿಕ ಸೌಲಭ್ಯಗಳ ಉದ್ಘಾಟನೆಯನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ ನೆರವೇರಿಸಲಿದ್ದಾರೆ. ಲಯನ್ಸ್ ಹ್ಯುಮೆನಿಟೇರಿಯನ್ ಸರ್ವಿಸ್ ಟ್ರಸ್ಟ್ ಅಧ್ಯಕ್ಷ ದೇವಿದಾಸ ಶೇಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಡ್ಮಿನಿಸ್ಟ್ರೇಟಿವ್ ಬ್ಲಾಕ್ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದಾರೆ. ನೇತ್ರ ತಜ್ಞ ವೈದ್ಯರ ಕೊಠಡಿಯನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಉದ್ಘಾಟಿಸಲಿದ್ದಾರೆ. ಹೊರರೋಗಿಗಳ ವಿಭಾಗದ ಕೊಠಡಿಯನ್ನು ಮಾಜಿ ಸಚಿವ ಮತ್ತು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥಾಪಕ ಅಧ್ಯಕ್ಷ ಡಾ.ಸಿ.ಎಸ್. ವೆರ್ಣೇಕರ, ಟ್ರಸ್ಟಿಗಳಾದ ವಿ.ಐ.ಹೆಗಡೆ, ಮದನ ನಾಯಕ, ರಘುನಾಥ ದಿವಾಕರ, ಲಯನ್ಸ್ ಕ್ಲಬ್ ಅಧ್ಯಕ್ಷ ಅನಂತ ಕಾಮತ, ನೇತ್ರ ತಜ್ಞರಾದ ಡಾ.ಮಲ್ಲಿಕಾರ್ಜುನ, ಡಾ.ಮೇಘಾ ದಿವಾಕರ ಇದ್ದರು.