ಕುಮಟಾ : ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಪರೀಕ್ಷೆಯಲ್ಲಿ ಫೇಲ್ ಆದ ಕಾರಣಕ್ಕೆ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ತಾಲೂಕಿನ ಹೊಲನಗದ್ದೆಯ ಕಡ್ಲೆ ನಿವಾಸಿ ಪ್ರಣಮ್ ಈಶ್ವರ ನಾಯ್ಕ ( 18 ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ. ಡಾ ಎ.ವಿ ಬಾಳಿಗಾ ಕಾಲೇಜ್ ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು , ಇಂದು ಪ್ರಕಟವಾದ ಪಿಯುಸಿ ಫಲಿತಾಂಶದಲ್ಲಿ ಪ್ರಣವ್ ಫೇಲ್ ಆಗಿದ್ದಾನೆ . ಈ ವಿಷಯಕ್ಕೆ
ಮನನೊಂದು, ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಈತನ ತಂದೆ ಆಟೋ ಚಾಲಕನಾಗಿದ್ದು , ಒಬ್ಬನೇ ಮಗನಾದ ಈತನನ್ನು ಬಹಳ ಪ್ರೀತಿಯಿಂದ ಬೆಳೆಸಿದ್ದರು. ಈತ ಕೂಡ ಚೆನ್ನಾಗಿ ಓದಿ ಒಳ್ಳೆಯ ನೌಕರಿ ಹಿಡಿಯುವ ಕನಸು ಕಂಡಿದ್ದ . ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗುತ್ತಿದ್ದಂತೆ ಮನನೊಂದ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ . ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .