ಕುಮಟಾ: ತಾಲೂಕಿನ ಕಡೆಕೋಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಹುಂಡೈ ಶೋರೂಮ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.ಬೋರ್ಡ್ ನಲ್ಲಿ ಶಾರ್ಟ್ ಸಕ್ರ್ಯೂಟ್ ಸಂಭವಿಸಿರುವುದು ಈ ಅಗ್ನಿ ಅನಾಹುತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಈ ವೇಳೆ ಒಂದು ಕಾರು, ನಾಲ್ಕು ಕಂಪ್ಯೂಟರ್, ಎರಡು ಟೇಬಲ್, ಕೀಬೋರ್ಡ್ ಸೇರಿ ಹಲವು ದಾಖಲೆಗಳು ಬೆಂಕಿಗೆ ಆಹುತಿಯಾಗಿದೆ ತಡರಾತ್ರಿ ಸುಮಾರು 1.30ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಕೆಲಸ ಮಾಡುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಕೂಡಲೇ ಕುಮಟಾ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾನೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹೆಚ್ಚಿನ ಅನಾಹತವನ್ನು ತಪ್ಪಿಸಿ, ಬೆಂಕಿಯನ್ನು ನಂದಿಸಿದ್ದಾರೆ. ಬೋರ್ಡ್ ನಲ್ಲಿ ಶಾರ್ಟ್ ಸಕ್ರ್ಯೂಟ್ ಸಂಭವಿಸಿರುವುದು ಈ ಅಗ್ನಿ ಅನಾಹುತಕ್ಕೆ ಕಾರಣ ಎಂದು ತಿಳಿದುಬಂದಿದೆ. ಕುಮಟಾ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.