Header Ads Widget

Koojalli times ನಲ್ಲಿ ಪ್ರಸಾರವಾಗುವ ವಿವಿಧ ಬಗೆಯ ಕಾರ್ಯಕ್ರಮಗಳನ್ನು ವಿಕ್ಷೀಸಲು ನಮ್ಮ (facebook page), (youtube channel), (instagram), (twitter page) ಗಳನ್ನು follow ಮಾಡಿ

ಗೋಕರ್ಣದ ಕೋಟಿ ತೀರ್ಥದಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿ ಸಾವು

ಕುಮಟಾ: ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಗೋಕರ್ಣದ ಕೊಟ್ಟಿ ತೀರ್ಥ ತುಂಬಿತುಳುಕುತ್ತಿದೆ. ಅದಲ್ಲದೆ ಕೋಟಿ ತೀರ್ಥವು ಈಗ ನವೀಕರಣಗೊಂಡದ್ದು, ಸ್ವಚ್ಛ ನೀರಿನಿಂದ ಕಂಗೊಳಿಸುತ್ತಿದ್ದು, ಹೆಚ್ಚೆಚ್ಚು ಜನರನ್ನು ಆಕರ್ಷಿಸುತ್ತಿದೆ. ಆದರೆ ಇದರ ಬೆನ್ನಲ್ಲೆ ದುರಂತವೊಂದು ನಡೆದಿದ್ದು, ಗೋಕರ್ಣದ ಮೇಲಿನಕೇರಿ ನಿವಾಸಿ ಸಂತೋಷ ರೆಬೆಲೋ ಕೋಟಿ ತೀರ್ಥದಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಗುರುತಿಸಲಾಗಿದೆ.
ಕೋಟಿ ತೀರ್ಥಕ್ಕೆ ತೆರಳಿದ ಸಂದರ್ಭದಲ್ಲಿ ಕಾಲುಜಾರಿಬಿದ್ದು ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತಾಗಿ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.