ಕುಮಟಾ: ನೆಲ್ಲಿಕೇರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಎಲ್.ಕೆ.ಜಿ ಹೆಚ್ಚುವರಿ ತರಗತಿಗಳನ್ನು ಶಾಸಕ ದಿನಕರ ಶೆಟ್ಟಿ ಅವರು ಉದ್ಘಾಟಿಸಿದರು. ಮಕ್ಕಳಿಗೆ ನೋಟ್ ಬುಕ್, ಪೆನ್ ಗಳನ್ನು ವಿತರಿಸಿ ಸಿಹಿ ಹಂಚಿದರು. ಈ ಸಂದರ್ಭದಲ್ಲಿ ವಿಶೇಷ ಮಕ್ಕಳಿಗೆ ಹೈಟೆಕ್ ಶೌಚಾಲಯ ನಿರ್ಮಿಸಿದ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಂದ್ರ ಎಲ್. ಭಟ್ಟ ಅವರು ಗಮನಕ್ಕೆ ತಂದರು.
ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕರು ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲೂ ಉನ್ನತ ಶಿಕ್ಷಣ ಸಿಗಬೇಕು ಎನ್ನುವ ಕಾರಣದಿಂದ ಎಲ್.ಕೆ.ಜಿ. ವಿಭಾಗಕ್ಕೆ ಹೆಚ್ಚುವರಿ ತರಗತಿಗಳನ್ನು ಒದಗಿಸಲಾಗಿದೆ. ಬಿಜೆಪಿ ಸರ್ಕಾರವು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಒಲವನ್ನು ಹೊಂದಿದ್ದು ಅದು ಎಲ್ಲೆಡೆ ಸಾಕಾರಗೊಳ್ಳುತ್ತಿರುವ ಉದಾಹರಣೆ ನಮ್ಮ ಮುಂದಿದೆ ಎಂದು ಹೇಳಿದರು.
ಡಿಡಿಪಿಐ ಈಶ್ವರ ನಾಯ್ಕ, ಕ್ಷೇತ್ರ ಸಮನ್ವಯಾಧಿಕಾರಿ ರೇಖಾ ನಾಯಕ, ಪ್ರಾಂಶುಪಾಲ ಸತೀಶ ನಾಯ್ಕ ಮುಂತಾದವರು ಇದ್ದರು.