ಕಾರವಾರ: ತಾಲ್ಲೂಕಿನ ಗೋಟೆಗಾಳಿ ಗ್ರಾಮದ ಬರ್ಗಿಯ ಸಾಳಮಕ್ಕಿ ಹೊಳೆಯಿಂದ ಸಂದೀಪ್ ಗಾಂವಕರ ಅವರ ಮನೆಗೆ ಸಂಪರ್ಕಿಸುವ ಸೇತುವೆ ನಿರ್ಮಾಣಕ್ಕೆ 30 ಲಕ್ಷ ಅನುದಾನವನ್ನು ಒದಗಿಸಲಾಗಿದ್ದು, ಸೇತುವೆ ನಿರ್ಮಾಣ ಸ್ಥಳವನ್ನು ಶಾಸಕಿ ರೂಪಾಲಿ ನಾಯ್ಕ ಪರಿಶೀಲನೆ ನಡೆಸಿದರು.
ಈ ಮಾತನಾಡಿದ , ಶಾಸಕಿ ರೂಪಾಲಿ ನಾಯ್ಕ, ಹಿಂದೆ ಈ ಭಾಗದಲ್ಲಿ ಸರಿಯಾದ ರಸ್ತೆಗಳಿಲ್ಲದೆ ಓಡಾಟಕ್ಕೆ ತೊಂದರೆಯಾಗುತ್ತಿತ್ತು. ಈಗ ಅನೇಕ ರಸ್ತೆಗಳನ್ನು ನಿರ್ಮಿಸಲಾಗಿದೆ. ಇನ್ನು ಕೆಲವು ರಸ್ತೆಗಳಿಗೆ ಅನುದಾನವನ್ನು ಒದಗಿಸಲಾಗಿದ್ದು ಶೀಘ್ರದಲ್ಲೇ ನಿರ್ಮಾಣವಾಗಲಿವೆ.
ಅದೇ ರೀತಿ ಮಳೆಗಾಲದಲ್ಲಿ ಹಳ್ಳದ ನೀರು ಉಕ್ಕಿ ಹರಿದು ಶಾಲೆಗೆ ಹೋಗಲು ಸಮಸ್ಯೆಯನ್ನು ಅನುಭವಿಸುತ್ತಿರುವುದು ಗಮನಕ್ಕೆ ಬಂದಿದೆ. ಹಲವು ವರ್ಷಗಳಿಂದ ಹಳ್ಳಕ್ಕೆ ತಾತ್ಕಾಲಿಕ ಕಟ್ಟಿಗೆ ಸೇತುವೆ ನಿರ್ಮಿಸಿಕೊಂಡು ಓಡಾಡುತ್ತಿರುವುದು ಮನಗಂಡು ಅದಕ್ಕಾಗಿ, ಬರ್ಗಿ ಹಳ್ಳಕ್ಕೆ 30 ಲಕ್ಷ ಅನುದಾನವನ್ನು ಒದಗಿಸಲಾಗಿದೆ. ಶೀಘ್ರವಾಗಿ ಸೇತುವೆ ನಿರ್ಮಾಣ ಮಾಡಿಕೊಡಲಾಗುವುದು.
ಶಾಲೆಗೆ ಹೋಗುವ ಮಕ್ಕಳಿಗೆ ಬಸ್ ಸಮಸ್ಯೆ ವ್ಯವಸ್ಥೆ ಮಾಡುವಂತೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಮಿನಿ ಬಸ್ ಅಥವಾ ದೊಡ್ಡ ಬಸ್ ಬಿಡುವ ಕುರಿತು ಸೂಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಬೂತ್ ಪ್ರಮುಖರು, ಸಾರ್ವಜನಿಕರು ಉಪಸ್ಥಿತರಿದ್ದರು.