Header Ads Widget

Koojalli times ನಲ್ಲಿ ಪ್ರಸಾರವಾಗುವ ವಿವಿಧ ಬಗೆಯ ಕಾರ್ಯಕ್ರಮಗಳನ್ನು ವಿಕ್ಷೀಸಲು ನಮ್ಮ (facebook page), (youtube channel), (instagram), (twitter page) ಗಳನ್ನು follow ಮಾಡಿ

ಆಶಾ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ

ಕಾರವಾರ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ ತಾಲೂಕುಗಳಲ್ಲಿನ ಗ್ರಾಮೀಣ ಪ್ರದೇಶಧಲ್ಲಿ ಆಶಾಕಾರ್ಯಕರ್ತೆಯಾಗಿ ಸೇವೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕುಮಟಾ ತಾಲೂಕಿನ ಕತಗಾಲ್, ದಿವಳಿ, ಅಂಕೋಲಾ ತಾಲೂಕಿನ ಮೊಗಟಾ, ಹೊನ್ನಾವರ ತಾಲೂಕಿನ ಗೇರುಸೊಪ್ಪಾ, ಜೊಯಿಡಾ ತಾಲೂಕಿನ ಚಂಡೆವಾಡಿ, ಯಲ್ಲಾಪುರ ತಾಲೂಕಿನ ಕಳಚೆ,ಮಾವಿನಮನೆ ಹೋಬಳಿಯ ಪ್ರದೇಶಗಳ ಆಸಕ್ತ ಅಭ್ಯರ್ಥಿಗಳು ಜೂ.30ರೊಳಗಾಗಿ ಆಯಾ ಗ್ರಾಮ ಪಂಚಾಯತ/ ಗ್ರಾಮ ಸಭೆಯಿಂದ / ವಾರ್ಡ ಮಟ್ಟದಿಂದ ಆಯ್ಕೆಗೊಂಡು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖಾಂತರ ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಯು ಗ್ರಾಮ ಅಥವಾ ವಾರ್ಡನ ಸ್ಥಳೀಯ ನಿವಾಸಿಯಾಗಿರಬೇಕು  ವಿವಾಹಿತ ಮಹಿಳೆ ಅಥವಾ ವಿಧವೆಯಾಗಿರಬೇಕು. ವಯಸ್ಸು 25-45 ವಯೋಮಿತಿಯೊಳಗೆ ಇರಬೇಕು. ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು . ಶಾಶ್ವತ ಕುಟುಂಬ ಕಲ್ಯಾಣ ಯೋಜನೆಯನ್ನು ಅಳವಡಿಸಿಕೊಂಡಿರಬೇಕು ಪರಿಣಾಮಕಾರಿಯಾದ ಸಂವಹನ ಕೌಶಲ್ಯ, ಉತ್ತಮ ನಾಯಕತ್ವದಗುಣ ಹಾಗೂ ಸಮುದಾಯದೊಂದಿಗೆ ಸ್ವಂದಿಸುವ ಗುಣಲಕ್ಷಣಗಳನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.