ಕುಮಟಾ: ಬಿಜೆಪಿ ಸರ್ಕಾರ ಇ.ಡಿ ತನಿಖೆಯ ನೆಪದಲ್ಲಿ ಗಾಂಧಿ ಕುಟುಂಬದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಮೇಲಿನ ದಾಳಿ ಹಾಗೂ ತನಿಖೆ, ಹಾಗೂ ಕಾಂಗ್ರೆಸ್ ಪಕ್ಷದ ರಾಜಕೀಯ ವರ್ಚಸ್ಸನ್ನು ತಗ್ಗಿಸುವ ದುರುದ್ದೇಶದಿಂದ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಮಾಜಿ ಶಾಸಕಿಯರಾದ ಶಾರದಾ ಮೋಹನ್ ಶೆಟ್ಟಿ ಹೇಳಿದರು.
ಅವರು ಬಿಜೆಪಿಯ ಸರ್ಕಾರದ ಧೋರಣೆ ಖಂಡಿಸಿ, ಕುಮಟಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಮಟಾ ತಹಶೀಲ್ದಾರ ಕಛೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿ ಮಾತನಾಡಿದರು
ಬಿಜೆಪಿಯ ದ್ವೇಷ ರಾಜಕಾರಣ, ಇತಿಹಾಸದಲ್ಲೇ ಮೊದಲ ಬಾರಿಗೆ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಗೆ ಪಕ್ಷದ ಜನಪ್ರತಿನಿಧಿಗಳು, ಪದಾಧಿಕಾರಿಗಳು ಪ್ರವೇಶಿಸದಂತೆ ನಿರ್ಬಂಧಿಸಿರುವುದು, ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಮೇಲಿನ ಪೋಲೀಸರ ದೌರ್ಜನ್ಯವನ್ನು ಖಂಡಿಸುತ್ತೇವೆ ಎಂದು ಹೇಳಿದರು.
ಮುಖಂಡರಾದ ಹೊನ್ನಪ್ಪ ನಾಯಕ ಮಾತನಾಡಿ
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ನೆಪವನ್ನು ಇಟ್ಟುಕೊಂಡು ಮುಗಿದುಹೋದ ಪ್ರಕರಣವನ್ನು ಖಾಸಗಿಯವರಿಂದ ಅರ್ಜಿ ಪಡೆದು ನಮ್ಮ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮೇಲೆ ಪುನ ವಿಚಾರಣೆ ಮಾಡುತ್ತಿದ್ದಾರೆ. ಅದು ದುರುದ್ದೇಶ ಪೂರಿತ ವಾಗಿ ವಿಚಾರಣೆ ಮಾಡುತ್ತಿದ್ದಾರೆ. ಹಿಂದೆ ಬಿಜೆಪಿಯ ಸರಕಾರದ ಗೋಧ್ರಾ ಗಲಭೆಯನ್ನು ಮರು ತನಿಖೆಗೆ ತರುತ್ತಾರಾ ಎಂದು ಪ್ರಶ್ನಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಎಲ್.ನಾಯ್ಕ ಮಾತನಾಡಿ, ಬಿಜೆಪಿಯ ದ್ವೇಷ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ. ಇವರು ಬೆಲೆ ಏರಿಕೆ ಕಡಿವಾಣ ಹಾಕಲು ಪ್ರಯತ್ನಿಸುವುದನ್ನು ಬಿಟ್ಟು ಕಾಂಗ್ರೆಸ್ ಪಕ್ಷದ ರಾಜಕೀಯ ವರ್ಚಸ್ಸನ್ನು ತಗ್ಗಿಸುವ ದುರುದ್ದೇಶ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಈ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ಹಾಗೂ ಇಡಿ ಸಂಸ್ಥೆ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ನಾಗೇಶ್ ನಾಯ್ಕ, ಕರವೇ ಜಿಲ್ಲಾಧ್ಯಕ್ಷರಾದ ಭಾಸ್ಕರ್ ಪಟಗಾರ, ಜಿ.ಪಂ ಮಾಜಿ ಸದಸ್ಯರಾದ ಪ್ರದೀಪ ನಾಯಕ, ಗಾಯತ್ರಿ ಗೌಡ, ಆರ್.ಹೆಚ್.ನಾಯ್ಕ, ಮದುಸೂಧನ ಶೇಟ್, ಶಂಕರ್ ಅಡಿಗುಂಡಿ,
ಮುಜಾಫರ್ ಶೇಖ್, ರಾಘವೇಂದ್ರ ಪಟಗಾರ, ಕೃಷ್ಣಾನಂದ ವೆರ್ಣೇಕರ್, ನಾರಾಯಣ , ಸಚಿನ್ ನಾಯ್ಕ, ನಾಗರಾಜ್ ನಾಯ್ಕ, ಬೊಮ್ಮಯ್ಯ ಪಟಗಾರ, ವೈಭವ ನಾಯ್ಕ, ನಿತ್ಯಾನಂದ ನಾಯ್ಕ, ಮನೋಜ ನಾಯಕ, ವಿಜಯ್ ವೆರ್ಣೇಕರ್, ಇತರರಿದ್ದರು.