ಕಾರವಾರ :-ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆ ಹಿನ್ನಲೆಯಲ್ಲಿ
ಜಿಲ್ಲೆಯಾಧ್ಯಾಂತ ಶಾಲಾ – ಕಾಲೇಜುಗಳಿಗೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಸೂಚನೆಯಂತೆ ಇಂದು ರಜೆ ಘೋಷಣೆ ಮಾಡಲಾಗಿದ್ದು ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಮುಂದುವರೆದರೆ ಮತ್ತೆ ರಜೆ ಮುಂದುವರಿಸುವ ಸೂಚನೆ ನೀಡಿದ್ದಾರೆ.
ಘಟ್ಟ ಪ್ರದೇಶವಾದುದರಿಂದ ಮಕ್ಕಳಿಗೆ ಶಾಲಾ-ಕಾಲೇಜುಗಳಿಗೆ ಬರುವುದಕ್ಕೆ ಕಷ್ಟವಾಗುತ್ತೆ, ಹೀಗಾಗಿ ರಜೆ ಘೋಷಣೆ ಮಾಡಲಾಗಿದ್ದು ,ಮಕ್ಕಳ ಸುರಕ್ಷಿತ ದೃಷ್ಟಿಯಿಂದ ಜಿಲ್ಲೆಯಲ್ಲಿ ರಜೆಗೆ ಸೂಚನೆ ನೀಡಲಾಗಿದೆ.