ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಕ್ಘ ಮಂಡಳಿ ಉಪಾಧ್ಯಕ್ಷ ಸ್ಥಾನವನ್ನು ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಆಜಾದ್ ಅಣ್ಣಿಗೇರಿ ಯವರಿಗೆ ನೀಡಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಬಗ್ಗೆ ಹಿಂದೂಪರ ಸಂಘಟನೆ ಹಾಗೂ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.
ಇದಲ್ಲದೆ ಕುದ್ದು ಕರಾವಳಿ ಭಾಗದ ಶಾಸಕರು ಸಹ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು , ಆಯ್ಕೆ ವಿರುದ್ಧ ತೀವ್ರ ಆಕ್ಷೇಪ ಬಂದ ಹಿನ್ನಲೆಯಲ್ಲಿ ರಾಜ್ಯ ವಕ್ಘ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವರು ಇಂದು ಈ ಆದೇಶಕ್ಕೆ ತಡೆ ನೀಡಿ ಆದೇಶ ನೀಡಿದ್ದಾರೆ.