ಕುಮಟಾ : ಆಜಾದಿಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೊಂಕಣ ಎಜುಕೇಶನ್ ಟ್ರಸ್ಟ್ ನ ಸಿವಿಎಸ್‌ಕೆ ಪ್ರೌಢಶಾಲೆಯವರು “ಡೈಮಂಡ್ ರನ್” ಹೆಸರಿನಲ್ಲಿ ಧ್ವಜಧಾರಿ ವಿದ್ಯಾರ್ಥಿಗಳಿಂದ ಪಟ್ಟಣದಾದ್ಯಂತ ಓಟ ನಡೆಸುವ ಮೂಲಕ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮ ಸರಣಿಗೆ ರಂಗು ತಂದರು. ತಾಲೂಕಿನ ತಹಶೀಲ್ದಾರ್ ಕಚೇರಿಯ ಎದುರಿನಲ್ಲಿ ಕುಮಟಾ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಕೆ. ಶೆಟ್ಟಿ ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹಾನ್ ನಾಯಕರನ್ನು ಸ್ಮರಿಸಿಕೊಳ್ಳುವ ಕಾರ್ಯ ವ್ಯವಸ್ಥಿತವಾಗಿ ನಡೆಯುತ್ತಿದೆ. ನರೇಂದ್ರ ಮೋದಿಯವರು ಅಮೃತ ಮಹೋತ್ಸವದ ಸವಿನೆನಪಿನಲ್ಲಿ ಎಲ್ಲೆಡೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಂಯೋಜಿಸಲು ಕರೆ ನೀಡಿದ್ದು, ಕೊಂಕಣ ಎಜುಕೇಶನ್ ಟ್ರಸ್ಟ್ ಅರ್ಥಪೂರ್ಣ ಕಾರ್ಯಕ್ರಮವನ್ನು ಸಂಯೋಜಿಸಿರುವುದು ಹೆಮ್ಮೆಯ ವಿಚಾರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ವಿದ್ಯಾರ್ಥಿಗಳು ದೇಶದ ಕುರಿತಾಗಿ ಜಾಗೃತರಾಗಬೇಕು, ಸುಭದ್ರ ಭಾರತ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು ಎಂದು ಕರೆ ನೀಡಿದರು.
.