ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಆಗ್ರಹ ಕೊನೆಗೂ ತಾರ್ಕಿಕ ಅಂತ್ಯಕ್ಕೆ ಬಂದಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಕುಮಟಾದಲ್ಲಿ ಪ್ರಾರಂಬಿಸಲು ಸರಕಾರ ತಿರ್ಮಾನಿಸಿದೆ. ಮುಂದಿನ ಎರಡು ದಿನಗಳಲ್ಲಿ ಅತಿ ದೊಡ್ಡ ಖಾಸಗಿ ವೈಧ್ಯಕೀಯ ಆಸ್ಪತ್ರೆಯ ಪ್ರತಿನಿಧಿಗಳು ಕುಮಟಾಕ್ಕೆ ಆಗಮಿಸಿ ಸ್ಥಳ ವೀಕ್ಷಣೇ ನಡೆಸಲಿದ್ದಾರೆ.
ಅಗಸ್ಟ ಎರಡನೇ ವಾರದಲ್ಲಿ ಜಿಲ್ಲೆಗೆ ಆರೋಗ್ಯ ಸಚಿವ ಡಾ ಸುಧಾಕರ ಆಗಮಿಸಲಿದ್ದು ಅ.16 ಇಲ್ಲವೇ 17ರಂದು ಮುಖ್ಯಮಂತ್ರಿ ಜಿಲ್ಲೆಗೆ ಆಗಮಿಸಿ ಆಸ್ಪತ್ರೆ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರ ಎಂದು ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ಕಲ್ಯಾಣ ಹಾಗೂಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಕಾರವಾರದಲ್ಲಿ ಟ್ರಾಮಾ ಸೆಂಟರ್ ಮೆಡಿಕಲ್ ಆಸ್ಪತ್ರೆ ಆವರಣದಲ್ಲಿ ಟ್ರಾಮಾ ಸೆಂಟ್ ನಿರ್ಮಾಣವಾಗಲಿದೆ. ಈಗಾಗಲೇ 160 ಕೋಟಿ ರೂ ಮಂಜೂರಾಗಿದ್ದು, ಕಾರವಾರದ ಟ್ರಾಮಾ ಸೆಂಟರ್‌ಗೆ ಅಗತ್ಯ ಸೌಲಭ್ಯ ಒದಗಿಸಲಾಗುತ್ತದೆ.
ಸೂಪರ್ ಸ್ವೇಷಾಲಿಟಿ ಆಸ್ಪತ್ರೆ ನಿರ್ಮಾಣ ಕಾರ್ಯ ಮುಕ್ತಾಯವಾಗಲು ಕನಿಷ್ಠ ನಾಲ್ಕೈದು ವರ್ಷ ಬೇಕಾಗಬಹುದು ಅಷ್ಟರವರೆಗೂ ಜಿಲ್ಲೆಯ ಜನರು ಬೇರೆ, ಜಿಲ್ಲೆಯ ಆಸ್ಪತ್ರೆ ಅವಲಂಬನೆತಡೆಯಲು ಕಾರವಾರದಲ್ಲಿ ಟ್ರಾಮಾ ಸೆಂಟರ್ ಆರಂಭಿಸಲಾಗಿದೆ.ಅಲ್ಲದೇ ಅಂಕೋಲಾದ ಹಟ್ಟಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸಾಕಷ್ಟು ಜಾಗವಿದ್ದು, ಅಲ್ಲಿ ಕ್ರಿಟಿಕಲ್ ಕೇರ್ ಸೆಂಟರ್ ಪ್ರಾರಂಬಿಸಲಾಗುವುದು ಎಂದು ತಿಳಿಸಿದರು.