ಕುಮಟಾ:ತಾಲೂಕಾ ಮಟ್ಟಡ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟದಲ್ಲಿ ಗುಂಪು ವಿಭಾಗದಲ್ಲಿ ಬಾಲಕರ ಕಬ್ಬಡಿಯಲ್ಲಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಯೋಗಾಸನ ಸ್ವರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ ಕುಮಾರ ರೋಹಿತ ಸಿಣ್ಣ ಅಂಬಿಗ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ದೈಹಿಕ ಶಿಕ್ಷಕರಾದ ನಾಗರಾಜ ನಾಯಕರ ಮಾರ್ಗದರ್ಶನದಲ್ಲಿ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಗಮನಾರ್ಹ ವಿದ್ಯಾರ್ಥಿಗಳುಸಾಧನೆ ಮಾಡುತ್ತಾ ಬಂದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಟೀಮ್ ಮ್ಯಾನೇಜರ್ ವಿಶ್ವನಾಥ ಬೇವಿನಕಟ್ಟಿ ಹಾಗೂ ಶಾಲಾ ಶಿಕ್ಷಕರು, ಮಹಾತ್ಮಗಾಂಧಿ ವಿದ್ಯಾವರ್ದಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ನಾಯಕ, ಉಪಾಧ್ಯಕ್ಷರಾದ ಶ್ರೀಕಾಂತ ನಾಯಕ ಕಾರ್ಯದರ್ಶಿ ಮೋಹನ ಬಿ ಕೆರೆಮನೆ ಹಾಗೂ ಆಡಳತ ಮಂಡಳಿ ಸದಸ್ಯರು, ಶಾಲಾ ಮುಖ್ಯಾಧ್ಯಾಪಕರಾದ ರೋಹಿದಾಸ ಎಸ್ ಗಾಂವಕರ, ಗ್ರಾ.ಪಂ ಅಧ್ಯಕ್ಷರಾದ ನಾಗರತ್ನಾ ಗಾಂವಕರ, ಉಪಾಧ್ಯಕ್ಷರಾದ ಶಾಂತ ನಾಯಕ, ಹಾಗೂ ಸದಸ್ಯರು, ಆಶ್ರಯ ಪೌಂಡೇಶನ ರಾಜೀವ ಗಾಂವಕರ, ಜಗದೀಶ ನಾಯಕ, ಕಾರ್ಯದರ್ಶಿ ಗುರುರಾಜ ನಾಯಕ, ಹಾಗೂ ಉಋಇನ ನಾಗರಿಕರು ಅಭಿನಂಧನೆ ಸಲ್ಲಿಸಿದ್ದಾರೆ.