ಕುಮಟಾ: ಜಿಲ್ಲೆಯಲ್ಲಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಗೆ ಸಂಭಂದಿಸಿದಂತೆ ಹಿನ್ನಡೆ ಉಂಟಾಗಿದೆ. ಆಸ್ಪತ್ರೆಯ ಶ್ರೀಘ್ರವಾಗಿ ಅನುದಾನ ಮಂಜೂರಾಗಿ ಶಂಕು ಸ್ಥಾಪನೆಯಾಗಲಿದೆ ಎಂದು ನಿರೀಕ್ಷೆಯಲ್ಲಿದ್ದ ಜನರು ಆಘಾತವನ್ನು ಉಂಟುಮಾಡಿದೆ. ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಪ್ರಸ್ತಾವನೆಯನ್ನೆ ತಳ್ಳಿ ಹಾಕಿದೆ ಆರ್ಥಿಕ ಇಲಾಖೆ, ಇದರಿಂದಾಗಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರೀಕ್ಷೆಯಲ್ಲಿದ್ದ ಜನತೆಯ ಆಘಾತ ಉಂಟಾಗಿದೆ. ಆರ್ಥಿಕ ಇಲಾಖೆಯಿಂದ ಅನುಮತಿ ಸಿಕ್ಕದರೆ ಮಾತ್ರ ಜಿಲ್ಲೆಗೆ ಆಸ್ಪತ್ರೆ ಮಂಜೂರಿಯಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಲಿಖಿತ ಉತ್ತರ ಸಿಕ್ಕಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಯಾವ ಕಾಲಮಿತಿಯಲ್ಲಿ ಮಂಜೂರು ಮಾಡಲಾಗುವುದು ಎಂದು ವಿಧಾನಸಭಾ ಅಧಿಕವೇಶನದಲ್ಲಿ ಶಾಸಕಿ ರೂಪಾಲಿ ನಾಯ್ಕ, ಅವರು ಪ್ರಶ್ನೆ ಕೇಳಿದ್ದು, ಇದಕ್ಕೆ ಬಂದ ಉತ್ತರಕನ್ನಡದ ಜನತೆಯನ್ನು ಮತ್ತೆ ಉತ್ತರ ಕನ್ನಡದ ಜನರನ್ನು ಕೆರಳುವಂತೆ ಮಾಡಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರವಾರದಲ್ಲಿ ಹೊಸದಾಗಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಈ ಹಿಂದೆ ಸ್ವೀಕರಿಸಲಾದ ಪ್ರಸ್ತಾವನೆಗೆ ಸಂಬಂದಿಸಿದಂತೆ, ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ಸೌಲಭ್ಯಕ್ಕಾಗಿ ಅಗತ್ಯವಿರುವ ಜಾಗ, ಸಿಬ್ಬಂದಿ, ಉಪಕರಣ ಹಾಗೂ ಇತ್ಯಾದಿ ಮೂಲ ಸೌಲಭ್ಯಗಳು ಹಾಗೂ ಅದಕ್ಕೆ ತಗಲುವ ಆರ್ಥಿಕ ಹೊರೆಯ ವಿವರಗಳನ್ನು ಸಿರ್ದೇಶಕರು, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾರವಾರ ಇವರಿಂದ ಪಡೆದು ಸದರಿ ಪ್ರಸ್ತಾವನೆಯ ಮಂಜೂರಾತಿಗಾಗಿ ಆರ್ಥಿಕ ಇಲಾಖೆಯ ಸಹಮತಿಯನ್ನು ಕೋರಲಾಗಿತ್ತು. ಆದರೆ ಆರ್ಥಿಕ ಇಲಾಖೆಯು ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿರುವುದಿಲ್ಲ.ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಸುಸಜ್ಜಿತವಾದ ಆದುನಿಕ ತಂತ್ರಜ್ಞಾನವುಳ್ಳ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಕುರಿತು ನಿರ್ದೇಶಕರು, ಕಾರವಾರ ವೈಧ್ಯಕೀಯ ವಿಜ್ಞಾನಗಳ ಸಂಸ್ಥೆಯವರಿಂದ ಸ್ವೀಕರಿಸಲಾಗುವ ಪ್ರಸ್ತಾವನೆ, ಕುರಿತು ಮಂಜೂರಾತಿ ಕೋರಿ ಮತ್ತೋಮ್ಮೆ ಕಡತವನ್ನು ಆರ್ಥಿಕ ಇಲಾಖೆಯ ಸಹಮತಿಗಾಗಿ ಕಳುಹಿಸಲು ಕ್ರಮವಹಿಸಲಾಗುವುದು.
ಈ ಪ್ರಸ್ತಾವನೆಯ ಬಗ್ಗೆ ಆರ್ಥಿಕ ಇಲಾಖೆಯಿಂದ ಅನುಮತಿ ಬಂದ ನಂತರದಲ್ಲಿ ಅನುದಾನದ ಲಭ್ಯತೆಗೆ ಅನುಗುಣವಾಗಿ ಹೊಸದಾಗಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಲಿಖಿತ ಉತ್ತರ ಸಿಕ್ಕಿದೆ. ವೈದ್ಯಕೀಯ ಶಿಕ್ಷಣ ಸಚಿವರು ಅನಾರೋಗ್ಯದ ನಿಮಿತ್ತ ಸಭೆಗೆ ಗೈರಾಗಿದ್ದು, ವಾರದ ಬಳಿಕ ಮತ್ತೆ ಚರ್ಚೆಗೆ ಅವಕಾಶ ನೀಡುವುದಾಗಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಈ ವೇಳೆ ಭರವಸೆ ನೀಡಿದರು.
ಜಿಲ್ಲೆಯಲ್ಲಿ ಎಲ್ಲಾ ಶಾಸಕರು ಒಗ್ಗಟ್ಟಾಗಿ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣದ ನಿಟ್ಟಿನಲ್ಲಿ ಹೆಚ್ಚಿನ ಮುತುವರ್ಜಿವಹಿಸಿ ಯೋಜನೆ ರೂಪಿಸಬೇಕಿದೆ. ಇಲ್ಲದೆ ಇದ್ರೆ ಜನರು ಬೀದಿಗಿಳಿದು ಹೋರಾಟ ಮಾಡುವ ಸನ್ನಿವೇಶಗಳು ಕಾಣುತ್ತಿದೆ.