ಕುಮಟಾ: ಗಿಬ್ ಬಾಲಕರ ಪೌಢ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಶಿಷ್ಯ ವೇತನ ವಿತರಣಾ ಕಾರ್ಯಕ್ರಮ ನಡೆಯಿತು. ಇಸ್ರೋದ ನಿವೃತ್ತ ವಿಜ್ಞಾನಿಗಳಾದ ಪಿ.ಜೆ.ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಗಿಬ್ ಹೈಸ್ಕೂಲ್ ಹಳೆಯ ಶಿಕ್ಷಣ ಸಂಸ್ಥೆ ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನಾನು ಕೂಡಾ ಈ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದಿದ್ದೇನೆ. ಈ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ಉತ್ತಮ ಹುದ್ದೆಗಳಲ್ಲಿದ್ದಾರೆ. ಪ್ರತಿವರ್ಷವೂ ಕೂಡಾ ಎಸ್.ಎಸ್.ಎಲ್.ಸಿಯಲ್ಲಿ ಉತ್ತಮವಾದ ಪಲಿತಾಂಶ ದಾಖಲಾಗುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿಪ್ರಾಯ ಪಟ್ಟರು.
ನಿವೃತ ಶಿಕ್ಷಕರಾದ ಬೇಬಿ ಪಡಿಯಾರರವರು ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಹೆಚ್ಚು, ಗಮನಹರಿಸಿದಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ಜೀವನವನ್ನು ನಡೆಸಲು ಸಾಧ್ಯವಿದೆ. ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಅಂಕಗಳನ್ನು ಪಡೆಯುವುದರ ಮೂಲಕ ಶಾಲೆಗೆ ಹಾಗೂ ಶಿಕ್ಷಕರಿಗೆ, ಪಾಲಕರಿಗೆ ಕೀರ್ತಿಯನ್ನು ತರಬೇಕು ಎಂದು ಹೇಳಿದರು.
ಈ ಸಂಧರ್ಭಧಲ್ಲಿ ಶಾಲೆಯ ಮುಖ್ಯಾಧ್ಯಪಕಿಯರಾದ ಶ್ರೀಮತಿ ಮಹಾಮಾಯ ಕಾಮತ, ಶಿಕ್ಷಕರಾದ ವಿ.ಎನ್ ಕುಬಾಲ್, ವಿಜಯಕುಮಾರ ನಾಯ್ಕ, ಎಸ್.ಎಸ್. ಪೈ, ದಯಾ ಶಾನಭಾಗ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಇದ್ದರು.