ಹೊನ್ನಾವರ : ದೇಶದ ಕನ್ಯಾಕುಮಾರಿಯಿಂದಾ ಕಾಶ್ಮೀರದವರೆಗೆ ಸುಮಾರು 3,758ಕಿ.ಮೀ. “ಭಾರತ ಜೋಡೋ” ಪಾದಯಾತ್ರೆ ಹಮ್ಮಿಕೊಂಡಿರುವ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧೀಯವರು ಇಂದು ಶುಕ್ರವಾರ ಮೈಸೂರು ಜಿಲ್ಲೆಯ ಗುಂಡ್ಲುಪೇಟೆಗೆ ಪಾದಾರ್ಪಣೆ ಮಾಡುವ ಮೂಲಕ ಕರ್ನಾಟಕಕ್ಕೆ ಆಗಮಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ಹೇಳಿದರು.
ಅವರು ರಾಹುಲ್ ಗಾಂಧೀಯವರ ಪಾದಯಾತ್ರೆ ಕರ್ನಾಟಕಕ್ಕೆ ಆಗಮಿಸಿದ ಸಂದರ್ಭದಲ್ಲಿ, ರಾಜ್ಯಾದ್ಯಂತ ಪ್ರತಿ ಬ್ಲಾಕ್ ಮಟ್ಟದಲ್ಲಿ ಬೈಕ್ ರ‍್ಯಾಲಿ ಮೂಲಕ ರಾಹುಲ್ ಗಾಂಧೀಯವರನ್ನು ಸ್ವಾಗತಿಸುವ ಕಾರ್ಯಕ್ರಮ ನಡೆಯುತ್ತಿದ್ದು,ಹೊನ್ನಾವರ ಬ್ಲಾಕ್ ಕಾಂಗ್ರೆಸ್ ನಗರದ ಶರಾವತಿ ಸರ್ಕಲ್ ಬಳಿ ಏರ್ಪಡಿಸಿದ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ರಾಹುಲ್ ಗಾಂಧೀಯವರು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 22 ದಿನಗಳ ಕಾಲ ಸುಮಾರು 580 ಕಿ.ಮೀ. ಪಾದಯಾತ್ರೆ ನಡೆಸಲಿದ್ದಾರೆ ಎಂದರು. ನಂತರ ಬ್ಲಾಕ ಕಾಂಗ್ರೆಸ್ ನಗರದ ಬಂದರ ರಸ್ತೆಯ ಮೂಲಕ, ದುರ್ಗಾಕೇರಿ ಮಾರ್ಗವಾಗಿ, ಕರ್ಕಿ ನಾಕಾ ಮೂಲಕ,ಬೆಂಗಳೂರು ಸರ್ಕಲ್ ಮಾರ್ಗದ ಮೂಲಕ ಪುನಃ ಶರಾವತಿ ಸರ್ಕಲ್‌ಗೆ ಆಗಮಿಸಿ, ಬೈಕ್ ರ‍್ಯಾಲಿಯನ್ನು ಸಮಾಪ್ತಿಗೊಳಿಸಲಾಯಿತು.
ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಶಾಸಕಿ ಶಾರದಾ ಶೆಟ್ಟಿ, ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧೀ ತಮ್ಮ ಪ್ರಾಣದ ಹಂಗು ತೊರೆದು ದೇಶದ ಐಕ್ಯತೆ ಮತ್ತು ಸುಭಧ್ರತೆಗಾಗಿ “ಭಾರತ ಜೋಡೋ” ಪಾದಯಾತ್ರೆ ಕೈಗೊಂಡಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಮಹಿಳಾ ವಿಭಾಗದ ಅಧ್ಯಕ್ಷೆ ಪುಷ್ಪಾ ಮಹೇಶ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಜಿಕ್ರಿಯಾ ಶೇಖ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಕೃಷ್ಣಾ ಹರಿಜನ, ಸೇವಾದಳ ವಿಭಾಗದ ಅಧ್ಯಕ್ಷ ಮೋಹನ ಆಚಾರಿ, ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ಅಧ್ಯಕ್ಷರಾದ ಕೆ.ಎಚ್.ಗೌಡ, ಇಂಟೇಕ್ ಅಧ್ಯಕ್ಷ ಆಗ್ನೇಲ್ ಡಯಾಸ್,ಇಂಟಕ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೇಶವ ಮೇಸ್ತ,ಶ್ರೀಕಾಂತ್ ಮೇಸ್ತ, ಸೇವಾದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಮಾರಿಮನೆ, ನಗರ ಘಟಕದ ಅಧ್ಯಕ್ಷ ಚಂದ್ರಶೇಖರ ಚಾರೋಡಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ಬಾಲಚಂದ್ರ ನಾಯ್ಕ, ಇನ್ನೂ ನೂರಾರು ಕಾರ್ಯಕರ್ತರು ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.