ಹೊನ್ನಾವರ : ಭಾರತದ ಐಕ್ಯತೆ ಮತ್ತು ಸಮಗ್ರತೆಗಾಗಿ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರ ನೇತ್ರತ್ವದಲ್ಲಿ ಕಳೆದ ಸೆಪ್ಟಂಬರ್ ತಿಂಗಳಿನಿAದ ತಮಿಳುನಾಡಿನ ಪೆರಂಬದೂರಿನಿAದ ಆರಂಭಗೊಂಡಿರುವ ಪಾದಯಾತ್ರೆ, ಈಗಾಗಲೇ ತಮಿಳುನಾಡು ಮತ್ತು ಕೇರಳ ರಾಜ್ಯವನ್ನು ಮುಗಿಸಿ, ಕಳೆದ ತಿಂಗಳು ದಿ.೩೦ರಂದು ರಾಜ್ಯದ ಚಾಮರಾಜ ಜಿಲ್ಲೆಯ ಗುಂಡ್ಲುಪೇಟೆಯನ್ನು ತಲುಪಿ, ರಾಜ್ಯದಲ್ಲಿ ಪಾದಯಾತ್ರೆ ಮುಂದುವರಿಸಿದೆ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣಾ ನಾಯ್ಕ ನುಡಿದರು.
ಅವರು ಪಟ್ಟಣದ ಸಾಗರ್ ರೆಸಿಡೆನ್ಸಿ ಸಭಾಭವನದಲ್ಲಿ ಏರ್ಪಡಿಸಿದ ಜಿಲ್ಲೆಯ ಎಲ್ಲಾ ಮಾಜಿ ಶಾಸಕರು,ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಮತ್ತು ಪಕ್ಷದ ಪ್ರಮುಖರ ಭಾರತ್ ಜೋಡೋ ಪಾದಯಾತ್ರೆಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಬರುವ ಬುಧವಾರ ದಿ.೧೨ರಂದು ರಾಹುಲ್ ಗಾಂಧಿಯವರ ನೇತ್ರತ್ವದ ಭಾರತ್ ಜೋಡೋ ಪಾದಯಾತ್ರೆ ಚಿತ್ರದುರ್ಗ ಜಿಲ್ಲೆಯ ಚಳ್ಳೆಕೆರೆಯನ್ನು ತಲುಪಲಿದ್ದು, ಅಂದು ಜಿಲ್ಲೆಯ ಎಲ್ಲಾ ಪ್ರಮುಖ ಮುಖಂಡರು, ಕಾರ್ಯಕರ್ತರು ರಾಹುಲ್ ಗಾಂಧಿಯವರನ್ನು ಬರಮಾಡಿಕೊಂಡು ಅವರೊಂದಿಗೆ ಹೆಜ್ಜೆ ಹಾಕಲು ನಿರ್ಧರಿಸಲಾಗಿದೆ ಎಂದರು.
ಕೆ.ಪಿ.ಸಿ.ಸಿ.ಉಪಾಧ್ಯಕ್ಷ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಐವಾನ್ ಡಿಸೋಜಾ ಮಾತನಾಡಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಗೆ ಜನಸಮೂದಾಯದಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತಿದ್ದು, ಇದೊಂದು ಐತಿಹಾಸಿಕ ಪಾದಯಾತ್ರೆಯಾಗಿ ಮಾರ್ಪಡುತ್ತಿದೆ ಎಂದರು.ಯಾವುದೆ ಪಕ್ಷ ಬೇಧವಿಲ್ಲದೇ, ಸಮಾಜದ ಎಲ್ಲಾ ವರ್ಗದವರೊಂದಿಗೆ ಬೆರೆಯುತ್ತಿರುವ ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆಯನ್ನು ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲಾ ಕಾರ್ಯಕರ್ತರು ಸಹಕರಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ, ಮಾಜಿ ಶಾಸಕರಾದ ಮಂಕಾಳ ವೈದ್ಯ, ಸತೀಶ ಸೈಲ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಮಾನಂದ ನಾಯ್ಕ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸುಜಾತಾ ಗಾಂವಕರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ ಶೆಟ್ಟಿ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೆಗಡೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಂ.ಎನ್.ಸುಬ್ರಮಣ್ಯ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ, ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ, ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಲ್.ನಾಯ್ಕ ಇನ್ನೂ ಹಲವು ಪಕ್ಷದ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು.