ನವದೆಹಲಿ: ಕರ್ನಾಟಕ ರಾಜ್ಯದ 15ನೇ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ಘೋಷಣೆಯಾಗಿದ್ದು, ಮೇ 10ರಂದು ಮತದಾನ ನಡೆಯಲಿದೆ. ಮೇ 13 ಕ್ಕೆ ಮತ ಏಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಇಂದಿನಿಂದಲೆ ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಕರ್ನಾಟಕದಲ್ಲ ಒಟ್ಟು ೫.೨೧ ಕೋಟಿ ಮತದಾರರಿದ್ದಾರೆ. ಮೊದಲ ಭಾರಿಗೆ ೯೧೭೨೪೧ ಮಂದಿ ಮತದಾನ ಮಾಡಲಿದ್ದಾರೆ. ೮೦ ವರ್ಷ ಮೇಲ್ಪಟ್ಟವರು ೧೨,೧೫,೭೬೩ ಮತದಾರರಿದ್ದಾರೆ. ರಾಜ್ಯದಲ್ಲಿ ಒಟ್ಟು ೫.೨೧ಕೋಟಿ ಮತದಾರಿದ್ದು, ೨ ಕೋಟಿ ೬೨ ಯುವಕರು, ೨ ಕೋಟಿ ೫೯ ಲಕ್ಷ ಮಹಿಳಾ ಮತದಾರಿದ್ದಾರೆ. ೮೦ ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲ್ಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ.
ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು ಇದಕ್ಕೂ ಪೂರ್ವದಲ್ಲಿ ರಾಜ್ಯ ಸರ್ಕಾರದ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದೆ.
ಮುಂದಿನ ವಾರ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ,
ಚುನಾವಣೆ ಘೋಷಣೆ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಯ ಮೊದಲ ಪಟ್ಟಿ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮುಂದಿನ ವಾರ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಲಿದೆ.