ಕುಮಟಾ:ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷೆಯಾಗಿದ್ದ ಮಾಜಿ ಶಾಸಕಿ ಶಾರದಾ ಶೆಟ್ಟಿ ಗೆ ಟಿಕೇಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಅವರ ಬೆಂಬಲಿಗರು, ಹಾಗೂ ಕಾರ್ಯಕರ್ತರ ಒತ್ತಾಯದ ಮೇರೆಗೆ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದ್ದು, ಈ ನಿಟ್ಟಿನಲ್ಲಿ ಮೇ 10 ರಂದು ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಕುಮಟಾ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ಸಹಾಯಕ ಆಯುಕ್ತರಾದ ರಾಘವೇಂದ್ರ ಜಗಲಾಸರ ಅವರ ಮೂಲಕ ನಾಮ ಪತ್ರ ಸಲ್ಲಿಸಿದರು.
ಕೊನೆಯ ಹಂತದವರೆಗೂ ಕಾಂಗ್ರೆಸ್ ಪಕ್ಷದಿಂದ ಟಿಕೇಟ್ ಸಿಗಬಹುದೆಂಬ ನಿರೀಕ್ಷೆ ಹೊಂದಿದ್ದ ಶಾರದ ಮೋಹನ ಶೆಟ್ಟಿ ಅವರಿಗೆ ಪಕ್ಷ ಟಿಕೇಟ್ ನೀಡಿಲ್ಲವಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯಕರ್ತರೆಲ್ಲರ ಒತ್ತಾಸೆಯ ಮೇರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಅಂತೆಯೇ ನಾಮ ಪತ್ರ ಸಲ್ಲಿಕೆ ಮಾಡಿದ್ದಾರೆ.