ಕುಮಟಾ : ತಾಲೂಕಿನ ಕ್ರೈಂಮ್ ಬ್ರಾಂಚ್ ನ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಮತಿ ಪಟಗಾರ ಕೊನೆಯುಸಿರೆಳೆದಿದ್ದಾರೆ. ಮೂಲತಃ ಕಾಗಾಲ ಗ್ರಾಮದವರಗಿದ್ದ ಇವರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಿವಿಧ ಸ್ಥರಗಳಲ್ಲಿ ಸೇವೆ ಸಲ್ಲಿಸಿ, ಹುಟ್ಟಿದ ಊರಾದ ಕುಮಟಾ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಕಳೆದ ಕೆಲವು ತಿಂಗಳುಗಳಿಂದ ಅತಿಯಾದ ರಕ್ತದ ಒತ್ತಡ ಪರಿಣಾಮ ಕೋಮಾ ಸ್ಥಿತಿಗೆ ಜಾರಿದ್ದರು. ಕರ್ತವ್ಯ ನಿಷ್ಠೆಗೆ ಪ್ರಾಮಾಣಿಕವಾಗಿ ಕೆಲಸ ಮಾಡಿ, ಜನರ ಬಗ್ಗೆ ಅಪಾರ ಕಾಳಜಿ, ಪ್ರೀತಿಯನ್ನು ಹೊಂದಿದ್ದ ಇವರ ಅಗಲುವಿಕೆ, ಸಮಾಜಕ್ಕೆ ಮತ್ತು ಕುಟುಂಬಕ್ಕೆ ಅರಗಿಸಿಕೊಳ್ಳಲಾಗದ ನೋವುಂಟು ಮಾಡಿದೆ.
ಅವರು ಪುತ್ರ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದು, ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಹಿತೈಶಿಗಳು ಪ್ರಾರ್ಥಿಸಿದ್ದಾರೆ.