ಕುಮಟಾ: ಮಹಾತ್ಮಗಾಂಧೀ ವಿದ್ಯಾವರ್ಧಕ ಸಂಘ ಹಿರೇಗುತ್ತಿ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿಯ ೨೦೨೨-೨೩ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಗಮನಾರ್ಹವಾಗಿದೆ.
ಶಾಲೆಯ ಫಲಿತಾಂಶ ಶೇ. ೯೨% ಆಗಿರುತ್ತದೆ. ವಿಜೇತ ಎಮ್ ಗುನಗಾ ಪ್ರಥಮ ೯೫.೨೦%, ದ್ವಿತೀಯ ಅಕ್ಷತಾ ನಾಗೇಶ ನಾಯಕ ೮೮.೯೬%, ತೃತೀಯ ರೋಶಿನಿ ನಿಂಗು ಗೌಡ ೮೮.೪೮% ಪಡೆದಿದ್ದು ಶಾಲೆಗೆ ಕೀರ್ತಿ ತಂದಿರುತ್ತಾರೆ. ೮೬ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿದ್ದು ಅದರಲ್ಲಿ ೭೯ ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ಈ ಶೈಕ್ಷಣಿಕ ಸಾಧನೆಗೆ ಮಹಾತ್ಮಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ಎನ್.ನಾಯಕ ಆಡಳಿತ ಕಮಿಟಿಯ ಉಪಾಧ್ಯಕ್ಷರಾದ ಶ್ರೀಕಾಂತ ನಾಯಕ, ಕಾರ್ಯದರ್ಶಿ ಮೋಹನ ಬಿ ಕೆರೆಮನೆ ಹಾಗೂ ಸರ್ವ ಸದಸ್ಯರು, ಗ್ರಾಮ ಪಂಚಾಯತ ಅಧ್ಯಕ್ಷರಾದ ನಾಗರತ್ನ ಗಾಂವಕರ, ಉಪಾಧ್ಯಕ್ಷರಾದ ಶಾಂತಾ ಎನ್ ನಾಯಕ, ಬ್ರಹ್ಮ ಜಟಕ ಯುವಕ ಸಂಘದ ಅಧ್ಯಕ್ಷರಾದ ಜಗದೀಶ ಎನ್ ನಾಯಕ(ಪಪ್ಪು)/ಸದಸ್ಯರು ಹಾಗೂ ಮುಖ್ಯಾಧ್ಯಾಪಕರಾದ ರೋಹಿದಾಸ ಎಸ್ ಗಾಂವಕರ ಹಾಗೂ ಶಿಕ್ಷಕ/ಶಿಕ್ಷಕೇತರ ವೃಂದದವರು ಹಾಗೂ ಊರನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ.