Header Ads Widget

Koojalli times ನಲ್ಲಿ ಪ್ರಸಾರವಾಗುವ ವಿವಿಧ ಬಗೆಯ ಕಾರ್ಯಕ್ರಮಗಳನ್ನು ವಿಕ್ಷೀಸಲು ನಮ್ಮ (facebook page), (youtube channel), (instagram), (twitter page) ಗಳನ್ನು follow ಮಾಡಿ

ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿದ ನಿವೇದಿತ್ ಆಳ್ವಾ

ಕುಮಟಾ: ಕಾಂಗ್ರೆಸ್ ಮುಖಂಡರಾದ ನಿವೇದಿತ್ ಆಳ್ವಾ ಅವರು ತಾಲೂಕಿನ ಸಂತೆಗುಳಿಕ್ಕೆ ಭೇಟಿ ನೀಡಿ ಅಲ್ಲಿನ ಜನರ ಕುಂದುಕೊರತೆಗಳನ್ನು ಆಲಿಸಿ ಸರಕಾರದ ಗಮನಕ್ಕೆ ತಂದು ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು.
 ಸಂತೆಗುಳಿ  ಗ್ರಾಮ ಪಂಚಾಯಿತಿಯಲ್ಲಿ ವಾಸವಾಗಿರುವ  ಸುಮಾರು ೧೫೦ ಮನೆಗಳಿಗೆಎ ಪಟ್ಟಾ ನೀಡಿ, ಹಲವಾರು ವರ್ಷಗಳು ಕಳೆದರೂ ಇಂದಿಗೂ ತಮ್ಮ ಮನೆಗಳ ಹಕ್ಕುಪತ್ರಗಳು ಸರಿಯಾಗಿ ನೋಂದಣಿಯಾಗಿಲ್ಲ ಎಂದು ಗಾಮಸ್ಥರು ತಮ್ಮ ಅಳಲನ್ನು ತೊಡಿಕೊಂಡಿದ್ದರು. ಈ ಬಗ್ಗೆ ದಾಖಲೆಗಳನ್ನು   ಪರಿಶೀಲಿಸಿ  ಸಂಭಂದಪಟ್ಟ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ನ್ಯಾಯ ಒದಗಿಸುವ ಭರವಸೆಯನ್ನು ನೀಡಿದರು. ಬಿಸಿಸಿ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷದ ತಾಲೂಕಾಧ್ಯಕ್ಷರಾದ ಹೊನ್ನಪ್ಪ ನಾಯಕ, ವಿ.ಎಲ್.ನಾಯಕ ಸೇರಿದಂತೆ ಗ್ರಾಮಸ್ಥರು ಇದ್ದರು.