ಅಂಕೋಲಾ : ತಾಲೂಕಿನ ಹೊನ್ನಳ್ಳಿಯ ಪದ್ಮಶ್ರೀ ತುಳಸಿ ಗೌಡ ಅವರಿಗೆ ರಾಷ್ಟ್ರಪತಿಯವರು ಜುಲೈ ೩ರಂದು ಕರ್ನಾಟಕ ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದರು.
ಚಿಕ್ಕಬಳ್ಳಾಪುರ ಮುದ್ದೇನ ಹಳ್ಳಿಯ ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿವಿ ಪದವಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆರು ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಸಂಗೀತ ಮತ್ತು ಕಲೆ ವಿಭಾಗದಲ್ಲಿ ಸಾಧನೆ ಮಾಡಿದ ಡಾ ಆರ್.ಕೆ.ಪದ್ಮನಾಭ, ಕ್ರೀಡೆ ಮತ್ತು ದಾರ್ಢ್ಯತೆ ವಿಭಾಗದಲ್ಲಿ ಸಾಧನೆ ಮಾಡಿದ ಪುಲ್ಲೆಲ ಗೋಪಿಚಂದ, ಆರೋಗ್ಯ ವಿಭಾಗದಲ್ಲಿ ಸಾಧನೆ ಮಾಡಿದ ಡಾ. ಪ್ರತಿಮಾ ಮೂರ್ತಿ, ಶಿಕ್ಷಣ ವಿಭಾಗದಲ್ಲಿ ಸಾಧನೆ ಮಾಡಿದ ಪ್ರೋ ವಿಜಯ ಶಂಕರ ಶುಕ್ಲಾ, ಸಮಾಜ ಸೇವೆ ವಿಭಾಗದಲ್ಲಿ ಸಾಧನೆ ಮಾಡಿದ ಪದ್ಮಶ್ರೀ ಪುರಸ್ಕ್ರತ ಶ್ರೀಮತಿ ತುಳಸಿ ಗೌಡರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.