ಕುಮಟಾ: ತಾಲೂಕಿನಲ್ಲಿ ಗ್ರಾ.ಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಕಲಭಾಗ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಂಜುನಾ ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಕಮಲಾ ಗಾವಡಿ ಅವರು ಅವಿರೋಧವಾಗಿ ಆಯ್ಕೆಯಾದರು.
ಈ ಮೂಲಕ ಎರಡನೆ ಅವಧಿಗೂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಇನ್ನು ೨೭ ಸದಸ್ಯರನ್ನು ಒಳಗೊಂಡ ಅತಿದೊಡ್ಡ ಗ್ರಾ.ಪಂ ಆದ ಹೆಗಡೆ ಗ್ರಾ.ಪಂನಲ್ಲಿ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಮಂಜುನಾಥ ಜಿ ಪಟಗಾರ ಹಾಗೂ ಉಪಾಧ್ಯಕ್ಷರಾಗಿ ಆಶಾ ನಾಯ್ಕ ಅವರು ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯ ಬೆಂಬಲಿತ ಅಭ್ಯರ್ಥಿ ಮಂಜುನಾಥ ಪಟಗಾರ ವಿರುದ್ದ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಾಂತರಾಮ ನಾಯಕ ಹಾಗೂ ಉಪಾಧ್ಯಕ್ಷ ಹುದ್ದೆಗೆ ಬಿಜೆಪಿ ಬೆಂಬಲಿ ಅಭ್ಯರ್ಥಿ ಆಶಾ ನಾಯ್ಕ ವಿರುದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಾಗವೇಣಿ ಮುಕ್ರಿ ಸ್ವರ್ದಿಸಿದ್ದು, ಅಧ್ಯಕ್ಷರಾಗಿ ಮಂಜುನಾಥ ಜಿ ಪಟಗಾರ ಹಾಗೂ ಉಪಾಧ್ಯಕ್ಷರಾಗಿ ಆಶಾ ನಾಯ್ಕ ಅವರು ಆಯ್ಕೆಯಾಗಿದ್ದಾರೆ.
ಮೂರೂರು ಗ್ರಾ.ಪಂ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಧ್ಯಕ್ಷರಾಗಿ ಭಾರತಿ ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಶಾರದಾ ಶೆಟ್ಟಿ ಅಭಿಮಾನಿ ಬಳಗ ಬೆಂಬಲಿತ ಅಭ್ಯರ್ಥಿ ಕೃಷ್ಣ ಗೌಡ ಆಯ್ಕೆಯಾಗಿದ್ದಾರೆ. ವಾಲಗಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಸೂರಜ್ ನಾಯ್ಕ ಸೋನಿ ಅಭಿಮಾನಿ ಬಳಗ ಬೆಂಬಲಿತ ಶಾಂತಿ ರಾಮಚಂದ್ರ ಮಡಿವಾಳ ಗೆಲವು ಸಾಧಿಸಿದ್ದಾರೆ. ಉಪಾಧ್ಯಕ್ಷರಾಗಿ ಸುಧಾಕರ ತಿಮ್ಮಣ್ಣ ಗೌಡ, ( ಕಾಂಗ್ರೆಸ್ ಬೆಂಬಲಿತ ) ಆಯ್ಕೆಯಾಗಿದ್ದಾರೆ. ಅಳಕೋಡ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ದೇವು ಗೌಡ, ಹಾಗೂ ಉಪಾಧ್ಯಕ್ಷರಾಗಿ ಸರೋಜಾ ಭಟ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.