ಕುಮಟಾ : ಕುಮಟಾ ತಾಲೂಕಾ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಯುವ ಮುಖಂಡ ಹಾಗೂ ಕುಮಟಾ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಭುವನ್ ಶ್ರೀಧರ ಭಾಗ್ವತ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಭುವನ್ ಶ್ರೀಧರ ಭಾಗ್ವತ್ ತಕ್ಷಣದಿಂದ ಕುಮಟಾ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದೂ ಅವರು ಸೂಚಿಸಿದ್ದಾರೆ.ಕಳೆದ ವಿಧಾನ ಸಭಾಚುನಾವಣೆಯ ಸಮಯದಲ್ಲಿ ಹೊನ್ನಪ್ಪ ನಾಯಕ ಅವರಿಗೆ ಅಧ್ಯಕ್ಷ ಜವಾಬ್ದಾರಿ ನೀಡಲಾಗಿತ್ತು. ಈಗ ಭುವನ್ ವರಿಗೆ ಅಧ್ಯಕ್ಷ ಜವಾಬ್ದಾರಿ ನೀಡಲಾಗಿದೆ.
ಭುವನ್ ಶ್ರೀಧರ ಭಾಗ್ವತ್ ಪಕ್ಷದಲ್ಲಿ ಹಾಗೂ ಕಾರ್ಯಕರ್ತರಲ್ಲಿ ಉತ್ತಮ ಭಾಂದವ್ಯ ಹೊಂದಿದ್ದಾರೆ.