ನವದೆಹಲಿ: 543 ಲೋಕಸಭಾ ಕ್ಷೇತ್ರಗಳ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ಬಗ್ಗೆ ದೆಹಲಿಯ ವಿಜ್ಞಾನಭವನದಲ್ಲಿ ಸುದ್ದಿಗೋಷ್ಠಿ ನಡದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ. ಏಳು ಹಂತದಲ್ಲಿ ಲೋಕಸಭಾ ಮತದಾನ ನಡೆಯಲಿದ್ದು ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ಮೇ 7 ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ.ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.
ಏಪ್ರೀಲ್ 19 ರಂದು ಮೊದಲ ಹಂತ, ಏಪ್ರೀಲ್ 26 ರಂದು ಎರಡನೇ ಹಂತ ಮೇ 7 ರಂದು ಮೂರನೇ ಹಂತ ಮೇ 13ರಂದು ನಾಲ್ಕನೇ ಹಂತ, ಮೇ 20 ರಂದು ಐದನೇ ಹಂತ ಮೇ 25ರಂದು ಆರನೇ ಹಂತ ಮತ್ತು ಜೂನ್ 1 ರಂದು ಏಳನೇ ಹಂಥದ ಮತದಾನ ನಡೆಯಲಿದೆ.