ಅಂಕೋಲಾ: ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಧಾರಾಕರವಾಗಿ ಮಳೆಯಾಗುತ್ತಿದ್ದು ಮಳೆಯಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ . ಗುಡ್ಡ ಕುಸಿತ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದೆ. ಟ್ಯಾಂಕರ್ ಚಾಲಕ, ಕ್ಲೀನರ್ ಸೇರಿ ಒಂಬತ್ತು ಜನ ನಾಪತ್ತೆಯಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದಿರುವ ಆಯ್ ಆರ್ ಬಿ ಕಂಪನಿಯ ಅವೈಜ್ಞಾನಿಕ ಮತ್ತು ಅಪೂರ್ಣ ಕಾಮಗಾರಿಯಿಂದ, ಹೆದ್ದಾರಿ 66 ರ ಅಂಕೋಲಾ ಕುಮಟಾ ಹೆದ್ದಾರಿ ಮಾರ್ಗ ಮಧ್ಯೆ ಶಿರೂರು ಬೊಮ್ಮಯ್ಯ ದೇವಸ್ಥಾನದ ಸಮೀಪ ಗುಡ್ಡ ಕುಸಿತ ಸಂಭವಿಸಿದೆ, ಗುಡ್ಡ ಕುಸಿದ ಪರಿಣಾಮ ಹೆದ್ದಾರಿ ಅಂಚಿನ ಸಣ್ಣಪುಟ್ಟ ಗೂಡುಅಂಗಡಿಗಳು ಸಂಪೂರ್ಣ ಹಾನಿಯಾಗಿದೆ . ಘಟನೆಯಲ್ಲಿ ಏಳು ಜನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಘಟನೆಗೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಕ್ರಿಯೆ ನೀಡಿದ್ದು, ಗುಡ್ಡ ಕುಸಿದು 7 ಜನ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಮಣ್ಣಿನಡಿ ಸಿಲುಕಿರುವವರ ರಕ್ಷಿಸಲು ಸೂಚನೆ ನೀಡಿದ್ದೇನೆ. ಎನ್ಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಇನ್ನು ಮಣ್ಣಿನಡಿ 9 ಜನ ಸಿಲುಕಿದ್ದಾರೆ. ಇದರಲ್ಲಿ ಒಂದೇ ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದವರು ಇದ್ದಾರೆ ಎನ್ನಲಾಗಿದೆ. 9 ಜನರಲ್ಲಿ 7 ಮಂದಿ ಮೃಪಟ್ಟಿದ್ದಾರೆ. ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಟ್ಯಾಂಕರ್ ಮೇಲೆ ಕುಸಿದ ಧರೆ
ಚಾಲಕ ಹಾಗೂ ಕ್ಲೀನರ್ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿನಲ್ಲಿನ ಗುಡ್ಡದ ಬಳಿ ಟ್ಯಾಂಕರ್ ನಿಲ್ಲಿಸಿ, ಪಕ್ಕದಲ್ಲಿದ್ದ ಅಂಗಡಿಯಲ್ಲಿ ಚಹಾ ಕುಡಿಯುತ್ತಿದ್ದರು. ಈ ವೇಳೆ ಧಿಡೀರನೆ ಬೃಹತ್ ಗುಡ್ಡ ಕುಸಿತ ಉಂಟಾಗಿದೆ. ಗುಡ್ಡ ಕುಸಿತ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದ್ದು ಟ್ಯಾಂಕರ್ ಚಾಲಕ, ಕ್ಲೀನರ್ ಸೇರಿ ಒಂಬತ್ತು ಜನ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಜಿಲ್ಲಾಡಳಿತದಿಂದ ಹೆದ್ದಾರಿ ಮೇಲೆನ ಮಣ್ಣಿನ ತೆರವು ಕಾರ್ಯಾಚರಣೆ ನಡೆಯುತ್ತಿದೆ.