ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ, ದಾಂಡೇಲಿ, ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 18 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಮಾಹಿತಿ ನೀಡಿದ್ದಾರೆ.