ಕಾರವಾರ: ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಮುನ್ನೇಚ್ಚರಿಕೆಯ ಕ್ರಮವಾಗಿ ನಾಳೆ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆಯನ್ನು ಮಾಡಿ ಆದೇಶ ಹೊರಡಿಸಲಾಗಿದೆ.
ಜಿಲ್ಲೆಯ ಕರಾವಳಿ ತೀರದ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ , ಹೊನ್ನಾವರ , ಭಟ್ಕಳ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜುಲೈ ೮ ರಂದು ರಜೆಯನ್ನು ಘೋಷಿಸಲಾಗಿದೆ ಎದು ಜಿಲ್ಲಾಧಿಕಾರಿ ಲಕ್ಷ್ಮೀಪ್ರೀಯಾ ತಿಳಿಸಿದ್ದಾರೆ.