Header Ads Widget

Koojalli times ನಲ್ಲಿ ಪ್ರಸಾರವಾಗುವ ವಿವಿಧ ಬಗೆಯ ಕಾರ್ಯಕ್ರಮಗಳನ್ನು ವಿಕ್ಷೀಸಲು ನಮ್ಮ (facebook page), (youtube channel), (instagram), (twitter page) ಗಳನ್ನು follow ಮಾಡಿ

ನವೆಂಬರ್ 23ಕ್ಕೆ ಕುಮಟಾ ತಾಲ್ಲೂಕು l0 ನೇ ಕನ್ನಡ ಸಾಹಿತ್ಯ ಸಮ್ಮೇಳನ


ಕುಮಟಾ : ತಾಲ್ಲೂಕು l0 ನೇ ಕನ್ನಡ ಸಾಹಿತ್ಯ ಸಮ್ಮೇಳನ ತಾಲ್ಲೂಕಿನ ಹಿರೇಗುತ್ತಿಯಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಕುಮಟಾ ತಾಲ್ಲೂಕು ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತ ದಿಂದ ನಿರ್ಧರಿಸಲಾಗಿದೆ ಎಂದು ಕಸಾಪ ಕುಮಟಾ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಮೋದ ನಾಯ್ಕ ತಿಳಿಸಿದ್ದಾರೆ. 
ಇತ್ತೀಚೆಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಕುಮಟಾ ತಾಲ್ಲೂಕು ಘಟಕದ ಕಾರ್ಯಾಲಯ ದಲ್ಲಿ ನಡೆದ ಕಸಾಪ ತಾಲ್ಲೂಕು ಘಟಕದ ಕಾರ್ಯಕಾರಿಣಿ ಸಭೆಯಲ್ಲಿ  ನವೆಂಬರ್ 23 ರವಿವಾರದಂದು ವಿಜ್ರಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ. ಈ ಸಂಬಂಧ  ಹಿರೇಗುತ್ತಿಯ ಊರ ನಾಗರಿಕರು ಹಾಗೂ ಬ್ರಹ್ಮಜಟಕ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಎಲ್ಲ ರೀತಿಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದರು. 
ಸಭೆಯಲ್ಲಿ ಮಾತನಾಡಿದ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಪಿ. ಆರ್. ನಾಯ್ಕ ಎಲ್ಲರ ಸಹಕಾರ ಪಡೆದು ಆರ್ಥಪೂರ್ಣವಾಗಿ ಸಮ್ಮೇಳನವನ್ನು ಸಂಘಟಿಸ ಬೇಕೆಂದು ಕರೆ ನೀಡಿದರು. 
ಸಮ್ಮೇಳನವನ್ನು ಅಚ್ಚುಕಟ್ಟಾಗಿ ಸಂಘಟಿಸಲು ಸ್ವಾಗತ ಸಮಿತಿ ಹಾಗೂ ಇತರೇ ಸಮಿತಿಗಳನ್ನು ರಚಿಸಲಾಗುವುದು ಎಂದರು.
ಸಭೆಯಲ್ಲಿ ಗೌರವ ಕಾರ್ಯದರ್ಶಿ ಗಳಾದ ಪ್ರದೀಪ ನಾಯಕ, ನಾಗರಾಜ ಶೆಟ್ಟಿ, ಸುರೇಶ್ ಭಟ್, ಸಂಧ್ಯಾ ಭಟ್, ಲಕ್ಷ್ಮಿ ನಾಯ್ಕ ವಿಜಯ್ ಗುನಗ ,ಯೋಗೀಶ್ ಪಟಗಾರ ಇತರರು ಇದ್ದರು.